ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ➤ ಸಿಎಂ ಬೊಮ್ಮಾಯಿ ಚಾಲನೆ!

(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ. 20. ಗಣರಾಜ್ಯೋತ್ಸವದ ಸಲುವಾಗಿ ಪ್ರತಿ ವರ್ಷ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ನಡೆಸಲಾಗುತ್ತದೆ. ಅದರಂತೆ ನಗರದ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಇಂದಿನಿಂದ 11 ದಿನಗಳ ಕಾಲ ವಿಶೇಷ ಫಲಪುಷ್ಪ ಪ್ರದರ್ಶನ ನಡೆಯಲಿದೆ.

213ನೇ ವಿಶೇಷ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಬಸವರಾಜ ಬೊಮ್ಮಾಯಿಯವರು ಇಂದು ಚಾಲನೆ ನೀಡಲಿದ್ದಾರೆ. ಈ ಮೂಲಕ ಸಸ್ಯಕಾಶಿ ಲಾಲ್ ಬಾಗ್ ನಲ್ಲಿನ ಫಲಪುಷ್ಪ ಪ್ರದರ್ಶನ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಾಗಲಿದೆ. ಈ ಬಾರಿಯ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಕಳೆದ ವರ್ಷದಂತೆ ರೂ.70 ಟಿಕೆಟ್ ದರ ನಿಗದಿ ಮಾಡಲಾಗಿದೆ. ರಜಾ ದಿನಗಳಂದು ರೂ.75 ಟಿಕೆಟ್ ನಿಗದಿ ಪಡಿಸಲಾಗಿದೆ. ಇನ್ನೂ ಮಕ್ಕಳಿಗೆ ತಲಾ ರೂ.30. ಶಾಲಾ ಸಮವಸ್ತ್ರ ಮತ್ತು ಗುರುತಿನ ಚೀಟಿ ಧರಿಸಿ ಬರುವಂತ ಶಾಲಾ ಮಕ್ಕಳಿಗೆ ಪೂರ್ಣ ಅವಧಿಯಲ್ಲಿ ಉಚಿತ ಪ್ರವೇಶ ಕಲ್ಪಿಸಲಾಗಿದೆ.

Also Read  ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ಹೋರಾಟ ಮಾಡಲೇ ಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

error: Content is protected !!
Scroll to Top