ಮಂಗಳೂರು: ಡ್ರಗ್ಸ್ ಪ್ರಕರಣ ➤ ಏಳು ಮೆಡಿಕಲ್ ವಿದ್ಯಾರ್ಥಿಗಳು, ಇಬ್ಬರು ವೈದ್ಯರ ಅಮಾನತು..!

(ನ್ಯೂಸ್ ಕಡಬ)newskadaba.com ಮಂಗಳೂರು, ಜ.20. ನಗರದಲ್ಲಿ ಇತ್ತೀಚೆಗೆ ನಡೆದ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ವೈದ್ಯರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಒಂದು ಖಾಸಗಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಮತ್ತು ಇಬ್ಬರು ವೈದ್ಯರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಎನ್.‌ಶಶಿಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.


ಪ್ರಕರಣಕ್ಕೆ ಸಂಬಂಧಿಸಿ ವಿವಿಧ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳ ವಿದ್ಯಾರ್ಥಿಗಳು ಹಾಗೂ ವೈದ್ಯರು ಸೇರಿದಂತೆ ಒಟ್ಟು ಹದಿನೈದು ಮಂದಿಯನ್ನು ಬಂಧಿಸಲಾಗಿತ್ತು.‌ ಶುಕ್ರವಾರ ಮತ್ತಷ್ಟು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಖಾಸಗಿ ಕಾಲೇಜು ಡೀನ್ ಅವರು ಮಾದಕ ವ್ಯಸನದ ವಿರುದ್ಧ ಶೂನ್ಯ ಸಹಿಷ್ಣುತೆಯನ್ನು ಬೆಂಬಲಿಸಿದ್ದು, ಪೊಲೀಸ್ ಇಲಾಖೆಯೊಂದಿಗೆ ಸಂಪೂರ್ಣ ಸಹಕಾರವನ್ನು ಭರವಸೆ ನೀಡಿದ್ದಾರೆ. ನಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ, ತನಿಖೆ ನಡೆಸುತ್ತಿದ್ದೇವೆ ಎಂದು ಆಯುಕ್ತರು ತಿಳಿಸಿದ್ದಾರೆ.

Also Read  ಪುತ್ತೂರು: ಜ್ಯೋತಿಷ್ಯ ಕೇಳಲು ಬಂದ ಬಾಲಕಿಯ ಮೇಲೆ ಅತ್ಯಾಚಾರ ► ಆರೋಪಿಯ ಬಂಧನ

error: Content is protected !!
Scroll to Top