ಸುರತ್ಕಲ್: ಕರ್ತವ್ಯದ ವೇಳೆ ಪೊಲೀಸ್ ಕಾನ್ ಸ್ಟೇಬಲ್ ಮೃತ್ಯು ➤  ಮೃತರ ಕುಟುಂಬಕ್ಕೆ 1 ಲಕ್ಷ ರೂ. ಚೆಕ್ ವಿತರಿಸಿದ ಪ್ರಿಯಾಂಕ್ ಖರ್ಗೆ..!

(ನ್ಯೂಸ್ ಕಡಬ)newskadaba.com  ಸುರತ್ಕಲ್, ಜ. 20. ಚಿತ್ತಾಪುರ್ ಶಾಸಕ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅವರು ಇತ್ತೀಚಿಗೆ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಪೊಲೀಸ್ ಕಾನ್ ಸ್ಟೇಬಲ್ ಹನುಮಂತ ಅವರ ಕುಟುಂಬಕ್ಕೆ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು.

ಪಣಂಬೂರು ಪೊಲೀಸ್ ಕ್ವಾಟ್ರಸ್ ನಲ್ಲಿ ವಾಸವಿದ್ದ ಬಾಗಲಕೋಟ ಮೂಲದ ಹನುಮಂತ ಅವರು ಕಾವೂರು ಠಾಣೆಯಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆ ಮೃತರಾಗಿದ್ದರು. ಮಾಜಿ ಶಾಸಕ ಮೊಯಿದೀನ್ ಬಾವಾ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮೇಶ್ ದಂಡೆಕೇರಿ, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಾಂಬಳಿ, ಮಾಜಿ ಉಪಮೇಯರ್ ಬಶೀರ್ ಬೈಕಂಪಾಡಿ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿ ಹ್ಯಾರಿಸ್ ಬೈಕಂಪಾಡಿ, ಷರೀಫ್ ಚೊಕ್ಕಬೆಟ್ಟು, ಜಲೀಲ್ ಬದ್ರಿಯ, ಎಸ್ ಸಿ ಎಸ್ ಟಿ ಮೋರ್ಚಾ ಅಧ್ಯಕ್ಷ ಮಲ್ಲಿಕಾರ್ಜುನ ಕೋಡಿಕಲ್, ಅಬೂಬಕರ್ ಪ್ಯಾರಡೈಸ್, ಪ್ರಹ್ಲಾದ್ ಮತ್ತಿತರರು ಉಪಸ್ಥಿತರಿದ್ದರು.

Also Read  ವಿಟ್ಲ: ಬೈಕ್- ಕಾರು ನಡುವೆ ಅಪಘಾತ ➤ ಸವಾರ ಗಂಭೀರ

 

error: Content is protected !!
Scroll to Top