ಪ್ರಧಾನಿ ನರೇಂದ್ರ ಮೋದಿ ನಾಳೆ(ಡಿ.18) ಮಂಗಳೂರಿಗೆ ► ಡಿ.19 ರಂದು ಲಕ್ಷದ್ವೀಪಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17.‌ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಡಿಸೆಂಬರ್ 18 ಸೋಮವಾರದಂದು ರಾತ್ರಿ ಕರಾವಳಿಗೆ ಆಗಮಿಸಲಿದ್ದಾರೆ.

ಸೋಮವಾರ ರಾತ್ರಿ 7.00 ಗಂಟೆಗೆ ವಿಶೇಷ ವಿಮಾನದ ಮೂಲಕ ಬಜಪೆ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ‌. ಡಿಸೆಂಬರ್ 19 ಮಂಗಳವಾರದಂದು ವಿಶೇಷ ವಿಮಾನದ ಮೂಲಕ ಲಕ್ಷದ್ವೀಪಕ್ಕೆ ತೆರಳಲಿದ್ದಾರೆ.

Scroll to Top