ಕಡಬ: ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನಕ್ಕೆ ವಾರಂಟ್ ಜಾರಿ !!

(ನ್ಯೂಸ್ ಕಡಬ)newskadaba.com ಸಂಪ್ಯ, ಜ.20. ಸಂಪ್ಯ ಠಾಣಾ ವ್ಯಾಪ್ತಿಯಲ್ಲಿ 2019ರಲ್ಲಿ ನಡೆದ ಅಪರಾಧ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಡಬ ಮೂಲದ  ಆರೋಪಿಯನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕು ಕೊಯಿಲ ಗ್ರಾಮದ ಕಲಾಯಿ ನಿವಾಸಿಯಾಗಿದ್ದು ಪ್ರಸ್ತುತ ಮಂಜೇಶ್ವರ ಉಪ್ಪಳ ಗ್ರಾಮದ ಕೈಕಂಬ ಜಂಕ್ಷನ್ ಇಂಡಿಯನ್ ಗ್ಯಾರೇಜ್ ಬಳಿ ವಾಸವಿರುವ ಇಬ್ರಾಹಿಂ ಖಲಂದರ್ ಯಾನೆ ಇಬ್ರಾಹಿಂ ಬಂಧಿತ ಆರೋಪಿ.

ಈತನ ಬಂಧನಕ್ಕೆ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು. ಸಂಪ್ಯ ಗ್ರಾಮಾಂತರ ಠಾಣಾ ಉಪನಿರೀಕ್ಷಕ ಉದಯರವಿ ಅವರ ಸಲಹೆಯಂತೆ ಗ್ರಾಮಾಂತರ ಠಾಣಾ ಹೆಡ್‌ಕಾನ್‌ ಸ್ಟೇಬಲ್‌ಗಳಾದ ಹರೀಶ್, ಪ್ರವೀಣ್ ಮತ್ತು ಕಾನ್‌ಸ್ಟೇಬಲ್ ಸಚಿನ್‌ರವರು ಜ.19ರಂದು ಕಾಸರಗೋಡು ವಿದ್ಯಾನಗರದಲ್ಲಿ ಆರೋಪಿಯನ್ನು ಪತ್ತೆ ಮಾಡಿ ಬಂಧಿಸಿ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Also Read  ಕಾರ್ಖಾನೆಯಲ್ಲಿ ಆಯಿಲ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ 7 ಮಂದಿ ಮೃತ್ಯು

 

error: Content is protected !!
Scroll to Top