ಗಣರಾಜ್ಯೋತ್ಸವ ನೌಕಾಪಡೆ ತಂಡಕ್ಕೆ ಮಂಗಳೂರಿನ ಲೆ|ಕ ದಿಶಾ ಅಮೃತ್ ನೇತೃತ್ವ !

(ನ್ಯೂಸ್ ಕಡಬ)newskadaba.com ಮಂಗಳೂರು, ಜ.21. ಭಾರತವು ತನ್ನ 74 ನೇ ಗಣರಾಜ್ಯೋತ್ಸವವನ್ನು ಜನವರಿ 26 ರಂದು ಆಚರಿಸಲು ಸಜ್ಜಾಗಿದ್ದು, ವಿಶೇಷವೆಂದರೆ ಈ ವರ್ಷ, ಕರ್ತವ್ಯ ಪಥದಲ್ಲಿ ಭಾರತೀಯ ನೌಕಾಪಡೆಯಲ್ಲಿ ಲೆಫ್ಟಿನೆಂಟ್ ಕಮಾಂಡರ್ ಆಗಿರುವ ಮಂಗಳೂರಿನ ಕುವರಿ ದಿಶಾ ಅಮೃತ್ ನೌಕಾಪಡೆ ತಂಡವನ್ನು ಮುನ್ನಡೆಸಲಿದ್ದಾರೆ.

ಈ ತುಕಡಿಯು 144 ಯುವ ನಾವಿಕರನ್ನು ಒಳಗೊಂಡಿದ್ದು, ನಾರಿ ಶಕ್ತಿ ಸ್ತಬ್ದಚಿತ್ರ ಇರಲಿದೆ. ಇದರಲ್ಲಿ ಮೂವರು ಮಹಿಳಾ ಅಧಿಕಾರಿಗಳು ಮತ್ತು ಐವರು ಪುರುಷ ಅಗ್ನಿವೀರ್‌ಗಳು ಭಾಗವಹಿಸಲಿದ್ದಾರೆ. ಅಮೃತ್ ಜೊತೆಗೆ, ಮತ್ತೊಬ್ಬ ಮಹಿಳಾ ಅಧಿಕಾರಿ, ಸಬ್ ಲೆಫ್ಟಿನೆಂಟ್ ವಲ್ಲಿ ಮೀನಾ ಎಸ್ ಕೂಡಾ ಜೊತೆಯಲ್ಲಿರುವರು.

Also Read  ಬೈಕ್ ಗೆ ಕಾರೊಂದು ಢಿಕ್ಕಿ ಹೊಡೆದು ಎಸ್ಕೇಪ್ ➤ ಕಾರನ್ನು ಬೆನ್ನಟ್ಟಿ ಹಿಡಿದ ಸ್ಥಳೀಯರು

29 ವರ್ಷದ ಲೆಫ್ಟಿನೆಂಟ್ ಕಮಾಂಡರ್ ನೌಕಾ ವಾಯು ಕಾರ್ಯಾಚರಣೆಯ ಅಧಿಕಾರಿಯಾಗಿದ್ದು, ಅಂಡಮಾನ ಮತ್ತು ನಿಕೋಬಾರ್ ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಮೃತ್ 2008 ರಲ್ಲಿ ನ್ಯಾಷನಲ್ ಕೆಡೆಟ್ ಕಾರ್ಪ್ಸ್ ನ ಗಣರಾಜ್ಯೋತ್ಸವ ತಂಡದ ಭಾಗವಾಗಿದ್ದರು ಎನ್ನಲಾಗಿದೆ.

 

error: Content is protected !!
Scroll to Top