ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ ಹೃದಯಾಘಾತದಿಂದ ಮೃತ್ಯು !

(ನ್ಯೂಸ್ ಕಡಬ)newskadaba.com ವಿಜಯಪುರ, ಜ.21. ಸಿಂದಗಿ ಕ್ಷೇತ್ರದ ಘೋಷಿತ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ ಸೋಮಜಾಳ (54) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಜೆಡಿಎಸ್ ಪಂಚರತ್ನ ಕಾರ್ಯಕ್ರಮದಲ್ಲಿ ಮತ್ತು ವಿಜಯಪುರದ ನಗರದ ದರಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಸಾರ್ವಜನಿಕ ಸಮಾವೇಶ ಕಾರ್ಯಕ್ರಮದಲ್ಲಿ‌ ಮಾಜಿ ಸಿಎಂ ಕುಮಾರಸ್ವಾಮಿ ಅವರೊಂದಿಗೆ ಭಾಗಿಯಾಗಿದ್ದರು.

ಬಳಿಕ ಸಂಬಂಧಿಕರ ಮನೆಯಲ್ಲಿ ಅಸ್ವಸ್ಥಗೊಂಡಿದ್ದ ಶಿವಾನಂದ ಪಾಟೀಲ ಅವರನ್ನು ಸಿಂದಗಿ ಪಟ್ಟಣದ ವಾತ್ಸಲ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

Also Read  ಇನ್ಮುಂದೆ ಗ್ರಾಮೀಣ ಪ್ರದೇಶಗಳಲ್ಲಿ ನಡೆಯಲ್ಲ `SSLC' ಪರೀಕ್ಷೆ

 

 

error: Content is protected !!
Scroll to Top