(ನ್ಯೂಸ್ ಕಡಬ)newskadaba.com ಮಂಗಳೂರು, ಜ.21. ರೈತರ ಅಭ್ಯುದಯಕ್ಕಾಗಿ ಕೃಷಿ ಇಲಾಖೆಯಿಂದ ಸರ್ಕಾರ ರೂಪಿಸುವ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಅಗತ್ಯವಿರುವ ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸದಾ ಸಿದ್ಧವಿದೆ. ಆ ದಿಸೆಯಲ್ಲಿ ಜಿಲ್ಲೆಯ ಸಮಗ್ರ ಕೃಷಿ ಪದ್ದತಿ ಉತ್ಕೃಷ್ಟತಾ ಕೇಂದ್ರವನ್ನು ನಿರ್ಮಿಸಲಾಗುತ್ತಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದ್ದಾರೆ.
ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಹಾಗೂ ನಬಾರ್ಡ್ ವತಿಯಿಂದ ಪಡೀಲು ಹತ್ತಿರದ ಅಳಪೆ ಗ್ರಾಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಕೃಷಿ ಪದ್ಧತಿ ಉತ್ಕೃಷ್ಟತಾ ಕೇಂದ್ರದ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.