➤ಗಣರಾಜ್ಯೋತ್ಸವ ದಿನಕ್ಕೆ ಅಪಮಾನ ➤ಸ್ಯಾಂಡಲ್ ವುಡ್ ನಟಿ ರಚಿತಾ ರಾಮ್ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ) newskadaba.com, ಮಂಡ್ಯ, ಜ. 21. ಸ್ಯಾಂಡಲ್​ವುಡ್ ​ನ ನಟಿ ರಚಿತಾ ರಾಮ್ ವಿರುದ್ಧ ಮಂಡ್ಯ ಜಿಲ್ಲೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

ಸಂವಿಧಾನಕ್ಕೆ ಮತ್ತು ಗಣರಾಜ್ಯೋತ್ಸವ ದಿನಕ್ಕೆ  ರಚಿತರಾಮ್​ ಅಪಮಾನ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸಿ. ಶಿವಲಿಂಗಯ್ಯ ಒತ್ತಾಯಿಸಿದ್ದಾರೆ. ಇತ್ತೀಚೆಗೆ ನಡೆದ ‘ಕ್ರಾಂತಿ’ ಸಿನಿಮಾದ ಬೃಹತ್ ಬಹಿರಂಗ ಕಾರ್ಯಕ್ರಮದಲ್ಲಿ ರಚಿತಾ ರಾಮ್ ಅವರು ಪ್ರತಿ ವರ್ಷ ಜನವರಿ 26ಕ್ಕೆ ಗಣರಾಜ್ಯೋತ್ಸವ ಆಚರಿಸುತ್ತಿದ್ದೀರಿ. ಈ ಬಾರಿ ಗಣರಾಜ್ಯೋತ್ಸವ ಮರೆತು ಕ್ರಾಂತಿ ಉತ್ಸವ ಮಾಡಿ ಎಂದಿದ್ದಾರೆ. ಇದು ಸಂವಿಧಾನ ವಿರೋಧಿ ಹೇಳಿಕೆಯಾಗಿದೆ. ಸಂವಿಧಾನ ಜಾರಿಯಾದ ದಿನಕ್ಕೆ ಮಾಡಿದ ಅಪಮಾನ ಎಂದು ಸುದ್ದಿಗೋಷ್ಠಿಯಲ್ಲಿ ಶಿವಲಿಂಗಯ್ಯ ಆರೋಪಿಸಿದರು.

Also Read  ಮಂಗಳೂರು: ಇಂದು ಹಳೆ ಬಂದರ್ ನಿಂದ ಮಾಲ್ದೀವ್ಸ್ ಗೆ ಪ್ರಥಮ ಸರಕು ನೌಕೆ ಯಾನ

ರಚಿತಾರಾಮ್​ ಅವರ ಹೇಳಿಕೆ ದೇಶ ದ್ರೋಹ ಹೇಳಿಕೆಯಾಗಿದ್ದು, ಇವರ ಮೇಲೆ ದೇಶ ದ್ರೋಹ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು. ರಚಿತಾ ರಾಮ್ ವಿರುದ್ಧ ಮದ್ದೂರು ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು  ಅವರು ತಿಳಿಸಿದರು.

error: Content is protected !!
Scroll to Top