ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ➤  7ನೇ ವೇತನ ಆಯೋಗ ವರದಿ ಶೀಘ್ರ ಸಲ್ಲಿಕೆಗೆ ಮನವಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.21. ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ, ಸೌಲಭ್ಯಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ 7ನೇ ವೇತನ ಆಯೋಗದ ವರದಿ ಶೀಘ್ರ ಸಲ್ಲಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ನಿಯೋಗದಿಂದ ಮನವಿ ಮಾಡಲಾಗಿದೆ.

ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ನೇತೃತ್ವದಲ್ಲಿ ಪದಾಧಿಕಾರಿಗಳ ನಿಯೋಗ 7ನೇ ವೇತನ ಆಯೋಗದ ಅಧ್ಯಕ್ಷ ಸುಧಾಕರ್ ರಾವ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಹಿಂದಿನ ವೇತನ ಆಯೋಗದ ಅವಧಿ ಮಾರ್ಚ್ 31ಕ್ಕೆ ಮುಕ್ತಾಯವಾಗಲಿದ್ದು, ಚುನಾವಣೆ ಸಮೀಪಿಸುತ್ತಿರುವುದರಿಂದ ನೀತಿ ಸಂಹಿತೆ ಜಾರಿಯಾಗುವ ದಿನಗಳು ಸಮೀಪಿಸುತ್ತಿವೆ. ಹೀಗಾಗಿ ಸರ್ಕಾರಿ ನೌಕರರಿಗೆ ಸಕಾಲಿಕ ವೇತನ ಪರಿಷ್ಕರಣೆಗೆ ಅನುಕೂಲವಾಗುವಂತೆ ಶೀಘ್ರವೇ ವರದಿ ಸಲ್ಲಿಸಬೇಕು ಎಂದು ಕೋರಲಾಗಿದೆ.

Also Read  ಮುಂದಿನ ವರ್ಷದಿಂದ ಹೆಣ್ಣುಮಕ್ಕಳ ಅತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸ್ ಪ್ರಾರಂಭ ➤ ಮುಖ್ಯಮಂತ್ರಿ ಬೊಮ್ಮಾಯಿ

 

 

error: Content is protected !!
Scroll to Top