ಪೋಷಕರ ಆಸ್ತಿ ಪಡೆದು ತಂದೆ ತಾಯಿಯನ್ನು ನಿರ್ಲಕ್ಷಿಸಿದ ಮಗಳು ➤ ಆಸ್ತಿ ದಾನ ಪತ್ರ ರದ್ದುಗೊಳಿಸಿದ ನಾಗರಿಕ ರಕ್ಷಣಾ ಕಾಯ್ದೆ!

(ನ್ಯೂಸ್ ಕಡಬ) newskadaba.com. ಮಡಿಕೇರಿ, ಜ. 21. ತಂದೆ ತಾಯಿಯರ ಯೋಗ ಕ್ಷೇಮ ನೋಡಿಕೊಳ್ಳದ ಕಾರಣ ಮಗಳ ಹೆಸರಿನಲ್ಲಿದ್ದ ಆಸ್ತಿಯನ್ನು ಇಲ್ಲಿನ ಉಪ ವಿಭಾಗಧಿಕಾರಿ ಅವರ ನ್ಯಾಯಾಲಯ ತಾಯಿಗೆ ವಾಪಸ್ ಕೊಡಿಸಿದ  ಘಟನೆ ನಡೆದಿದೆ.

ಕುಶಾಲನಗರ ತಾಲ್ಲೂಕಿನ ಬೊಳ್ಳೂರು ಗ್ರಾಮದ ಬಿ.ಎಸ್.ಜಾನಕಿ ತಮ್ಮ ಹೆಸರಿನಲ್ಲಿ 0.15 ಎಕ್ರೆ ಆಸ್ತಿಯನ್ನು ಹೊಂದಿದ್ದರು. ಈ ಆಸ್ತಿಯನ್ನು ಅವರ ಎರಡನೇ ಮಗಳಾದ ಜಯಲಕ್ಷಿ ದಾನಪತ್ರದ ಮೂಲಕ ತಮ್ಮ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದರು. . ನಂತರದ ದಿನಗಳಲ್ಲಿ ಪೋಷಕರ ಯೋಗಕ್ಷೇಮ ನೋಡಿಕೊಳ್ಳದೆ ನಿರ್ಲಕ್ಷಿಸಿದರು. ಇದರಿಂದ ನೊಂದ ಪೋಷಕರು ಇವರು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗೆ ಅರ್ಜಿ ಸಲ್ಲಿಸಿ ದಾನಪತ್ರ ರದ್ದುಗೊಳಿಸಿ ಆಸ್ತಿಯನ್ನು ವಾಪಸ್ ಕೊಡಿಸುವಂತೆ ಮನವಿ ಮಾಡಿದ್ದರು.

Also Read  ಕರ್ನಾಟಕ ಸರ್ಕಾರ, ಆಯುಷ್ ಇಲಾಖೆ ➤ ಉಚಿತ ಆಯುಷ್ ಚಿಕಿತ್ಸಾ ಶಿಬಿರ

ಆ ನಿಟ್ಟಿನಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಅರ್ಜಿಯನ್ನು ಉಪ ವಿಭಾಗಧಿಕಾರಿಗಳ ನ್ಯಾಯಾಲಯಕ್ಕೆ ವರ್ಗಾಯಿಸಿ ಸೂಕ್ತ ಕ್ರಮಕ್ಕೆ ಮನವಿ ಮಾಡಿದ್ದರು.

ವಿಚಾರಣೆ ನಡೆಸಿದ ಉಪವಿಭಾಗಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರು ಪಾಲಕರ ಪೋಷಣೆ, ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣೆ ಕಾಯ್ದೆ 2007ರ ಅಡಿ ದಾನಪತ್ರ ರದ್ದುಗೊಳಿಸಿ ಅಸ್ತಿಯನ್ನು ಬಿ.ಎಸ್. ಜಾನಕಿ ಅವರ ಹೆಸರಿಗೆ ವರ್ಗಾಯಿಸುವಂತೆ ಆದೇಶ ನೀಡಿರುತ್ತಾರೆ.

error: Content is protected !!
Scroll to Top