ವ್ಯಕ್ತಿಯೊಬ್ಬರ ಅಕ್ರಮ ಬಂಧನ ➤ ಇನ್ಸ್ ಪೆಕ್ಟರ್ ವಿರುದ್ಧ DYSP ದಾಳಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.21. ವ್ಯಕ್ತಿಯೊಬ್ಬರನ್ನು ಅಕ್ರಮವಾಗಿ ಬಂಧಿಸಿಡಲಾಗಿದ್ದ ಶೇಷಾದ್ರಿಪುರ ಠಾಣೆ ಮೇಲೆ ರಾಜ್ಯ ಮಾನವ ಹಕ್ಕು ಆಯೋಗದ ಅಧಿಕಾರಿಗಳು ದಾಳಿ ಮಾಡಿದ್ದು, ಹಲವು ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.

ಶೇಷಾದ್ರಿಪುರ ಠಾಣೆ ಇನ್‌ಸ್ಪೆಕ್ಟರ್ ಹೇಮಂತ್‌ ಕುಮಾರ್ ವಿರುದ್ಧ ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ (ಎಸ್‌ಎಚ್‌ಆರ್‌ಸಿ) ದಾಖಲಾಗಿದ್ದ ಪ್ರಕರಣದಲ್ಲಿ ಡಿ.ವೈ.ಎಸ್ಪಿ ಕೇಶವ್ ನೇತೃತ್ವದ ತಂಡ ಈ ದಾಳಿ ಮಾಡಿದೆ.

‘ಸ್ಥಳೀಯ ನಿವಾಸಿ ಆರ್. ಶ್ರೀಧರ್ ಎಂಬುವರನ್ನು ಪೊಲೀಸರು ಅಕ್ರಮ ಬಂಧನದಲ್ಲಿರಿಸಿದ್ದರು. ಯಾವುದೇ ದೂರು ಹಾಗೂ ಎಫ್‌ಐಆರ್ ಇಲ್ಲದಿದ್ದರೂ ಠಾಣೆಯಲ್ಲಿ ಕೂರಿಸಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಕುಟುಂಬಸ್ಥರಿಗೂ ಬೆದರಿಕೆಯೊಡ್ಡಿದ್ದರು. ಶ್ರೀಧರ್ ಅವರ ಅಕ್ರಮ ಬಂಧನ ಪ್ರಶ್ನಿಸಿದ್ದ ಮಗ ಚಂದರೇಶ್, ಆಯೋಗಕ್ಕೆ ದೂರು ನೀಡಿದ್ದರು’ ಎಂದು ಮೂಲಗಳು ಹೇಳಿವೆ.

Also Read  ಕಟ್ಟಿಗೆಗಾಗಿ ಗುಡ್ಡೆಗೆ ಹೋದ ವ್ಯಕ್ತಿ ಹೆಜ್ಜೇನು ಕಡಿದು ಮೃತ್ಯು

 

 

error: Content is protected !!
Scroll to Top