ಮಾಸ್ಕೋದಿಂದ ಗೋವಾಕ್ಕೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ)newskadaba.com  ಪಣಜಿ, ಜ. 21. ರಷ್ಯಾದ ರಾಜಧಾನಿ ಮಾಸ್ಕೋದಿಂದ ಗೋವಾಕ್ಕೆ ಹೊರಟಿದ್ದ ಚಾರ್ಟರ್ಡ್ ವಿಮಾನ ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಮಾರ್ಗ ಬದಲಾವಣೆ ಮಾಡಿ ಉಜ್ಬೇಕಿಸ್ತಾನದತ್ತ ಪ್ರಯಾಣಿಸಿದೆ. ದಕ್ಷಿಣ ಗೋವಾದ ದಬೋಲಿಮ್ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 4.15ಕ್ಕೆ ವಿಮಾನ ಲ್ಯಾಂಡ್ ಆಗಬೇಕಿತ್ತು.

ಅಜುರ್ ಏರ್ ಸಂಸ್ಥೆಯ ಈ ವಿಮಾನ ಭಾರತೀಯ ವಾಯುಪ್ರದೇಶವನ್ನು ಪ್ರವೇಶಿಸುವ ಮೊದಲು ಮಾರ್ಗ ಬದಲಾವಣೆ ಮಾಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಬಂದಿರುವ ಕುರಿತು, ಡಾಬೋಲಿಮ್ ವಿಮಾನ ನಿಲ್ದಾಣದ ನಿರ್ದೇಶಕರಿಂದ 12.30 ಕ್ಕೆ ಇಮೇಲ್ ಮೂಲಕ ಮಾಹಿತಿ ದೊರೆತಿತ್ತು. ಈ ಹಿನ್ನೆಲೆಯಲ್ಲಿ 240 ಪ್ರಯಾಣಿಕರಿದ್ದ ವಿಮಾನವನ್ನು ಬೇರೆಡೆಗೆ ತಿರುಗಿಸಲಾಗಿದೆ ಎಂದು ಅಧಿಕಾರಿ ಹೇಳಿದರು.

Also Read  ಭಾಗವತ ಭೀಷ್ಮ ಬಲಿಪ ನಾರಾಯಣ ನಿಧನಕ್ಕೆ ಸಿಎಂ ಸಂತಾಪ !!

 

 

error: Content is protected !!
Scroll to Top