ಕೆಆರ್‌ಎಸ್‌ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌

(ನ್ಯೂಸ್ ಕಡಬ)newskadaba.com  ಕೊಪ್ಪಳ, ಜ.21. ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್‌.ಎಸ್‌) ಪಕ್ಷದ ಹತ್ತು ಜನ ಕಾರ್ಯಕರ್ತರು ಇಲ್ಲಿನ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಹಾಗೂ ವೈದ್ಯರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಬಳಿಕ ಅವರಿಗೆ ಮಧ್ಯಂತರ ಜಾಮೀನು ಲಭಿಸಿದೆ.

ಕೆಆರ್‌ಎಸ್‌ ಪದಾಧಿಕಾರಿಯೊಬ್ಬರ ಸಂಬಂಧಿಕರ ಹೆರಿಗೆ ಜಿಲ್ಲಾಸ್ಪತ್ರೆಯಲ್ಲಿ ಆಗಿದ್ದು, ಮಾತ್ರೆ ತೆಗೆದುಕೊಳ್ಳುವ ವಿಷಯಕ್ಕೆ ಸಂಬಂಧಿಸಿ ಕಾರ್ಯಕರ್ತ ಹಾಗೂ ಆಸ್ಪತ್ರೆ ಸಿಬ್ಬಂದಿ ನಡುವೆ ಜಟಾಪಟಿಯಾಗಿದೆ ಎಂದು ತಿಳಿದುಬಂದಿದೆ.

ಬಳಿಕ ಕೆಲ ಕಾರ್ಯಕರ್ತರು ಜಿಲ್ಲಾಸ್ಪತ್ರೆಯಲ್ಲಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಮಾತಿಗೆ ಮಾತು ಬೆಳೆದು; ವಿಕೋಪಕ್ಕೆ ಹೋಯಿತು. ಸ್ಥಳಕ್ಕೆ ಬಂದ ಪೊಲೀಸರು ವಾತಾವರಣ ತಿಳಿಗೊಳಿಸಿದರು. ಘಟನೆ ಕುರಿತು ಆಸ್ಪತ್ರೆ ಸಿಬ್ಬಂದಿ ನೀಡಿದ ದೂರಿನ ಅನ್ವಯ ಎಫ್‌ಐಆರ್‌ ದಾಖಲಾಗಿದೆ.

Also Read  ಉಡುಪಿ: ದೇವಸ್ಥಾನದ ಒಳಗೆ ನೇಣು ಬಿಗಿದು ಯುವಕ ಆತ್ಮಹತ್ಯೆ

 

 

error: Content is protected !!
Scroll to Top