(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.21. ಆಟೋ ಡ್ರೈವರ್ ಜೊತೆಗೆ ಪ್ರೀತಿಗೆ ಬಿದ್ದಿದ್ದ ಮಗಳಿಗೆ ಪೋಷಕರು ಬುದ್ಧಿಮಾತು ಹೇಳಲು ಮುಂದಾಗಿದ್ದರು. ಆದರೆ ಈ ವೇಳೆ ಆತ್ಮಹತ್ಯೆ ಮಾಡಿಕೊಳ್ಳುವ ನಾಟಕ ಮಾಡಿದ್ದ ಯುವತಿ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬೆಂಗಳೂರು ನಗರದ ಹೆಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಯುವತಿಯನ್ನು ಲಾವಣ್ಯ ಎಂದು ಗುರುತಿಸಲಾಗಿದ್ದು, ತನ್ನ ಪ್ರೀತಿಯನ್ನು ಸಾಬೀತು ಪಡಿಸಲು ಮುಂದಾಗಿ ವಿಷ ಸೇವನೆ ಮಾಡಿದ್ದ ಯುವತಿ ಸಾವು ಬದುಕಿನ ನಡುವಿನ ಹೋರಾಟದಲ್ಲಿ ಕೊನೆಯುಸಿರೆಳೆದಿದ್ದಾಳೆ.