➤ ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೃದಯಾಘಾತದಿಂದ ಮೃತ್ಯು..!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಜ. 21. ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ಸೋಮಜ್ಯಾಲ (54) ಹೃದಯಾಘಾತದಿಂದ  ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ. ಮೃತರು ಮಾಜಿ ಸೈನಿಕರಾಗಿದ್ದು, ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಕ್ಷೇತ್ರದಲ್ಲಿ ಪಂಚರತ್ನ ಯಾತ್ರೆ ಕೈಗೊಂಡಿದ್ದರು. ಶುಕ್ರವಾರ ವಿಜಯಪುರ ಮತ್ತು ನಾಗಠಾಣದಲ್ಲಿ ನಡೆದ ಪಂಚರತ್ನ ಯಾತ್ರೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಪಾಲ್ಗೊಂಡಿದ್ದರು. ಅವರು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ವೇಳೆ ಅವರಿಗೆ ಎದೆ ನೋವು ಕಾಣಿಸಿಕೊಂಡಿತು. ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು.

Scroll to Top