ಸುರತ್ಕಲ್ : ರೈಲ್ವೇ ಹಳಿ  ಮೇಲೆ ಯುವಕನೋರ್ವನ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.23. ಅಪರಿಚಿತ ಯುವಕನೊಬ್ಬನ ಮೃತದೇಹವು ರೈಲ್ವೇ ಹಳಿಗಳ ಮೇಲೆ ಪತ್ತೆಯಾಗಿರುವ ಘಟನೆ ಕುಳಾಯಿಗುಡ್ಡೆ ರೈಲ್ವೆ ಸೇತುವೆ ಬಳಿ ನಡೆದಿದೆ ಎಂದು ವರದಿ ತಿಳಿಸಿದೆ.

30 ವರ್ಷದ ಯುವಕನ ಛಿದ್ರವಾದ ಮೃತದೇಹ ಪತ್ತೆಯಾಗಿದ್ದು, ಈತ ರೈಲಿಗೆ ಸಿಲುಕಿ ಮೃತಪಟ್ಟ ಶಂಕೆ ವ್ಯಕ್ತವಾಗಿದೆ.

ಮೃತ ವ್ಯಕ್ತಿಯು ಕಪ್ಪು ನೈಟ್ ಪ್ಯಾಂಟ್, ಹಳದಿ ಬಣ್ಣದ ಪೂರ್ಣ ತೋಳಿನ ಶರ್ಟ್ ಮತ್ತು ಕಪ್ಪು ಜರ್ಕಿನ್ ಧರಿಸಿರುತ್ತಾರೆ. ಇವರ ಬಗ್ಗೆ ಮಾಹಿತಿ ಇದ್ದರೆ ಸುರತ್ಕಲ್ ಪೊಲೀಸರನ್ನು ಸಂಪರ್ಕಿಸಲು ಕೋರಲಾಗಿದೆ.

 

Scroll to Top