ಮನೆ ಬಾಗಿಲಿಗೇ ಆಸ್ತಿ ದಾಖಲೆ ! ➤ ಕಂದಾಯ ಸಚಿವ ಆರ್.ಅಶೋಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಪೌತಿಖಾತೆ ಆಂದೋಲನದ ಮೂಲಕ ಆಸ್ತಿಯ ಖಾತೆ ಹಕ್ಕುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಆಡಳಿತಾತ್ಮಕ ಮಹತ್ವದ ಸುಧಾರಣೆ ಬಂದಿದೆ. ಪೌತಿ ಖಾತೆ ಹೊಂದಿದ ಖಾತೆದಾರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ದೊರೆಯುವ ಆರ್ಥಿಕ ಸೌಕರ್ಯಗಳನ್ನು ಕೂಡ ತ್ವರಿತವಾಗಿ ತಲುಪಿಸಬೇಕು ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು‌.

ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಪೌತಿಖಾತೆ ಆಂದೋಲನದಲ್ಲಿ ಖಾತೆ ಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು ಎನ್ನಲಾಗಿದೆ.

ರೈತ ಕುಟುಂಬಗಳು ತಮ್ಮ ಆಸ್ತಿಗಳನ್ನು ಭಾಗ ಮಾಡಿಕೊಳ್ಳುವುದು ಈ ಹಿಂದೆ ಬಹಳ ಸವಾಲಿನ ಕಾರ್ಯವೆನಿಸಿತ್ತು. ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ,ಪೌತಿ ಖಾತೆ ಆಂದೋಲನದ ಪರಿಣಾಮವಾಗಿ ಜನರ ಮನೆ ಬಾಗಿಲಿಗೆ ದಾಖಲೆಗಳು ಬರುವಂತಾಗಿದೆ. ಆಸ್ತಿಯಲ್ಲಿ ಗಂಡು ಹಾಗೂ ಹೆಣ್ಣು ಮಕ್ಕಳಿಗೆ ಸಮಾನ ಹಕ್ಕುಗಳು ಇವೆ,ಯಾವುದೇ ಅನಗತ್ಯ ತಂಟೆ, ತಕರಾರುಗಳಿಗೆ ಅವಕಾಶವಾಗದಂತೆ ನ್ಯಾಯಯುತ ಮಾರ್ಗದಲ್ಲಿ ಆಸ್ತಿ ವಿಭಜನೆ ಮಾಡಿಕೊಂಡು ಪ್ರತಿಯೊಬ್ಬರು ತಮ್ಮ ಪಾಲಿನ ಖಾತೆಗಳನ್ನು ಹೊಂದಿದರೆ, ಸರ್ಕಾರದ ವಿವಿಧ ಯೋಜನೆಗಳು ಮತ್ತು ಸಾಲ ಸೌಲಭ್ಯಗಳನ್ನು ಪಡೆಯಲು ಸುಲಭವಾಗುತ್ತದೆ ಎಂದರು.

Also Read  ಕಾಂಗ್ರೆಸ್ಸನ್ನು ಟೀಕಿಸುವ ಭರದಲ್ಲಿ ಮಿಜೋರಾಂ ಮತ್ತು ನೇಪಾಳದ ಚಿತ್ರಗಳನ್ನು ಬಳಸಿದ ಬಿಜೆಪಿ ► ಬಿಜೆಪಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯವಾಡುತ್ತಿರುವ ಸಾರ್ವಜನಿಕರು

 

error: Content is protected !!
Scroll to Top