ʻಸುಪ್ರೀಂ ತೀರ್ಪುಗಳು ಪ್ರಾದೇಶಿಕ ಭಾಷೆಗಳಲ್ಲಿಯೂ ಲಭ್ಯ ➤ ಸಿಜೆಐ ನಿರ್ಧಾರಕ್ಕೆ ಪ್ರಧಾನಿ ಮೋದಿ ಶ್ಲಾಘನೆ !

(ನ್ಯೂಸ್ ಕಡಬ)newskadaba.com ನವದೆಹಲಿ, ಜ.23. ಭಾರತದ ಭಾಷಾ ವೈವಿಧ್ಯತೆಯನ್ನು ಎತ್ತಿ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗುವಂತೆ ನೀಡಿದ ಹೇಳಿಕೆಗಾಗಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರನ್ನು ಶ್ಲಾಘಿಸಿದ್ದಾರೆ.

ಪ್ರತಿ ಭಾರತೀಯ ಭಾಷೆಯಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ಭಾಷಾಂತರಿಸಲು ಮತ್ತು ಉದ್ದೇಶಕ್ಕಾಗಿ ತಂತ್ರಜ್ಞಾನವನ್ನು ಬಳಸಿಕೊಳ್ಳಲು ಪ್ರತಿಪಾದಿಸಿದ ಸಮಾರಂಭದಲ್ಲಿ ಸಿಜೆಐ ಮಾತನಾಡುವ ವೀಡಿಯೊವನ್ನು ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಮೋದಿ, ‘ಇತ್ತೀಚಿನ ಸಮಾರಂಭದಲ್ಲಿ ಸಿಜೆಐ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಪ್ರಾದೇಶಿಕ ಭಾಷೆಗಳಲ್ಲಿ ಎಸ್‌ಸಿ ತೀರ್ಪುಗಳು ಲಭ್ಯವಾಗುವಂತೆ ಕೆಲಸ ಮಾಡುವ ಅಗತ್ಯತೆಯ ಬಗ್ಗೆ ಮಾತನಾಡಿದರು. ಅವರು ತಂತ್ರಜ್ಞಾನವನ್ನು ಬಳಸಿಕೊಳ್ಳುವಂತೆ ಸಲಹೆ ನೀಡಿದರು. ಇದು ಶ್ಲಾಘನೀಯ ಚಿಂತನೆಯಾಗಿದೆ. ಇದು ಅನೇಕ ಜನರಿಗೆ, ವಿಶೇಷವಾಗಿ ಯುವಕರಿಗೆ ಸಹಾಯ ಮಾಡುತ್ತದೆ’ ಎಂದಿದ್ದಾರೆ.

Also Read   ಬಾಲ್ಯವಿವಾಹ ಬಂಧನ ವಿನಾಶಕ್ಕೆ ದಾರಿ ➤ಅಸ್ಸಾಂ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ

 

error: Content is protected !!
Scroll to Top