(ನ್ಯೂಸ್ ಕಡಬ)newskadaba.com ನವದೆಹಲಿ, ಜ.23. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ಇಳಿಕೆಯಾಗಿದ್ದು, ಇದಕ್ಕೆ ಅನುಗುಣವಾಗಿ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ರಿಟೇಲ್ ತರ ಇಳಿಕೆಯಾಗುವ ಸಾಧ್ಯತೆ ಇದೆ.
ಜಾಗತಿಕ ಕಚ್ಚಾತೈಲ ದರ ಇಳಿಕೆ ಆಗಿರುವುದರಿಂದ ದೇಶದಲ್ಲಿಯೂ ಪೆಟ್ರೋಲ್, ಡೀಸೆಲ್ ಡಿಟೇಲ್ ದರ ಇಳಿಕೆ ಮಾಡುವಂತೆ ತೈಲ ಮಾರುಕಟ್ಟೆ ಸಂಸ್ಥೆಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರದೀಪ್ ಸಿಂಗ್ ಪುರಿ ಮನವಿ ಮಾಡಿದ್ದಾರೆ.
ವಾರಣಾಸಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಚ್ಚಾತೈಲ ದರ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿ ನಂತರದ ಕೆಲವು ತಿಂಗಳಿನಿಂದ ಕಚ್ಚಾತೈಲ ದರ ಭಾರಿ ಇಳಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ತೈಲ ಮಾರಾಟ ಕಂಪನಿಗಳು ಈಗಾಗಲೇ ತಮ್ಮ ನಷ್ಟ ಸರಿದೂಗಿಸಿಕೊಂಡಿದ್ದರೆ ದರ ಇಳಿಕೆಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಕಳೆದ 15 ತಿಂಗಳುಗಳಿಂದ ತೈಲ ಕಂಪನಿಗಳು ಬೆಲೆಗಳನ್ನು ಬದಲಾಯಿಸದ ಕಾರಣ ಪ್ರಯತ್ನಗಳನ್ನು ಶ್ಲಾಘಿಸಿದರು ಎಂದು ವರದಿ ತಿಳಿಸಿದೆ.