ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸವಾಗಿದ್ದ ಪಾಕ್ ಯುವತಿ ಅರೆಸ್ಟ್

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ. 23. ನೇಪಾಳ ಮೂಲಕ ಭಾರತ ಗಡಿ ದಾಟಿ, ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸವಾಗಿದ್ದ ಪಾಕ್ ಯುವತಿ ಇಕ್ರಾ ಜೀವನಿ (19) ಎಂಬುವರನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಪಾಕಿಸ್ತಾನದ ನಿವಾಸಿ ಇಕ್ರಾ, ಡೇಟಿಂಗ್ ಆ್ಯಪ್‌ ಮೂಲಕ ಉತ್ತರ ಪ್ರದೇಶದ ಮುಲಾಯಂ ಸಿಂಗ್‌ರನ್ನು ಪರಿಚಯಿಸಿಕೊಂಡು ವಿವಾಹವಾಗಿದ್ದರು. ಬಳಿಕ ಬೆಂಗಳೂರಿಗೆ ಬಂದು ಸರ್ಜಾಪುರ ರಸ್ತೆಯ ಜುನ್ನಸಂದ್ರದಲ್ಲಿ ವಾಸವಾಗಿದ್ದರು.

ಈ ಮಧ್ಯೆ ತಾಯಿಯನ್ನ ಸಂಪರ್ಕ ಮಾಡಲು ಇಕ್ರಾ ಜೀವನಿ ಯತ್ನಿಸಿದ್ದು, ಈ ಸಂಗತಿಯನ್ನು ಪತ್ತೆ ಮಾಡಿದ್ದ ಕೇಂದ್ರ ಗುಪ್ತಚರ ಇಲಾಖೆ, ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಇಕ್ರಾ ಜೀವನಿ ಹಾಗೂ ಮುಲಾಯಂ ಸಿಂಗ್‌ನ ಪೊಲೀಸರು ಬಂಧಿಸಿದ್ದಾರೆ. ಸದ್ಯ ಆರೋಪಿ ಯುವತಿಯನ್ನ ವಿಚಾರಣೆ ನಡೆಸಿದಾಗ ರಾವಾ ಯಾದವ್ ಎಂಬ ಹೆಸರು ಬದಲಾಯಿಸಿಕೊಂಡು ಪಾಸ್‌ಪೋರ್ಟ್‌ಗೆ ಅರ್ಜಿ ಹಾಕಿದ್ದ ಸಂಗತಿ ತಿಳಿಯಿತು. ಇನ್ನು ಬಂಧಿತ ಯುವತಿಯ ಬಗ್ಗೆ ಎಫ್‌ಆರ್‌ಆರ್‌ಓ ಅಧಿಕಾರಿಗಳಿಗೆ ಪೊಲೀಸರು ಮಾಹಿತಿ ನೀಡಿದ್ದು, ಅಧಿಕಾರಿಗಳು ಇಕ್ರಾರನ್ನು ಮಹಿಳಾ ಪುನರ್ವಸತಿ ಕೇಂದ್ರದಲ್ಲಿರಿಸಿದ್ದಾರೆ.

Also Read  ಆರು ರಾಜ್ಯಗಳ 100 ಸ್ಥಳಗಳಲ್ಲಿ NIA ಏಕಕಾಲದಲ್ಲಿ ದಾಳಿ

 

error: Content is protected !!
Scroll to Top