ಇಂಗ್ಲಿಷ್‌ ತೀರ್ಪುಗಳನ್ನು ಕನ್ನಡಕ್ಕೆ ಅನುವಾದಿಸಿವಂತೆ ಸೂಚನೆ ➤ ಸಿಎಂ ಬೊಮ್ಮಾಯಿ !

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.23. ನ್ಯಾಯಾಂಗ ವ್ಯವಸ್ಥೆಯಲ್ಲಿ ನಿಜವಾಗಲೂ ಕನ್ನಡದ ಬಳಕೆಯಾಗಬೇಕಾದರೆ ಮೊದಲು ಕನ್ನಡದ ಕಾನೂನು ನಿಘಂಟು ತಯಾರಿಸುವ ಕೆಲಸ ಆಗಬೇಕು. ಇದಕ್ಕಾಗಿ ತಜ್ಞರ ಸಮಿತಿ ರಚಿಸಿ. ಜತೆಗೆ ಇಂಗ್ಲೀಷ್‌ನಲ್ಲಿ ಬರುವ ಎಲ್ಲ ಪ್ರಮುಖ ತೀರ್ಪುಗಳನ್ನು ಕನ್ನಡಕ್ಕೆ ತರ್ಜುಮೆ ಮಾಡಿ ಪ್ರಕಟಿಸುವ ಕೆಲಸ ಮಾಡುವಂತೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

‘ಕನ್ನಡ ಅಭಿವೃದ್ಧಿ ಪ್ರಾಧಿಕಾರ’ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ 2019-20 ಮತ್ತು 2020-21ನೇ ಸಾಲಿನಲ್ಲಿ ವಿವಿಧ ಪ್ರಕರಣಗಳಲ್ಲಿ ಕನ್ನಡದಲ್ಲಿ ತೀರ್ಪು ನೀಡಿದ ಹಾಗೂ ವಾದ ಮಂಡಿಸಿದ ಒಟ್ಟು 120 ಮಂದಿ ಅಧೀನ ನ್ಯಾಯಾಲಯಗಳ ನ್ಯಾಯಾಧೀಶರು, ವಕೀಲರು ಹಾಗೂ ಸರ್ಕಾರಿ ಅಭಿಯೋಜಕರಿಗೆ ‘ನ್ಯಾಯಾಂಗದಲ್ಲಿ ಕನ್ನಡ’ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

Also Read  ಭೀಕರ ರಸ್ತೆ ಅಪಘಾತ ➤ ಮೂವರು ಸ್ಥಳದಲ್ಲೇ ಮೃತ್ಯು

error: Content is protected !!
Scroll to Top