ಬೆಂಗಳೂರಿನಲ್ಲಿ ಮತ್ತೊಂದು ಮೆಟ್ರೋ ಅಪಘಾತ ➤ ಕಾರಿನ ಮೇಲೆ ಬಿದ್ದ ಮೆಟ್ರೋ ಬ್ಯಾರಿಕೇಡ್ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಮೃತಟ್ಟ ಘಟನೆ ಹಸಿರಾಗಿರುವಂತೆಯೇ ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಮೆಟ್ರೋ ಅಪಘಾತ ಸಂಭವಿಸಿದ್ದು, ಕಾರಿನ ಮೇಲೆ ಬಿದ್ದ ಮೆಟ್ರೋ ಬ್ಯಾರಿಕೇಡ್ ಬಿದ್ದಿದೆ.

ಬೆಂಗಳೂರಿನ ದೊಡ್ಡನೆಕ್ಕುಂದಿ ಜಂಕ್ಷನ್‌ನಲ್ಲಿ ಮೆಟ್ರೊ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ನಿಲ್ಲಿಸಿದ್ದ ಬ್ಯಾರಿಕೇಡ್‌ ಕಾರಿನ ಮೇಲೆ ಬಿದ್ದಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.

ದೊಡ್ಡನೆಕ್ಕುಂದಿಯಿಂದ ಮಹದೇವಪುರ ಕಡೆಗೆ ಹೋಗುವ ಮುಖ್ಯರಸ್ತೆಯಲ್ಲಿ ಈ ಅವಘಡ ಸಂಭವಿಸಿದ್ದು, ಇಬ್ಬರು ಸ್ಥಳೀಯ ನಿವಾಸಿಗಳು ತಮ್ಮ ಹುಂಡೈ ಐ–10 ಕಾರಿನಲ್ಲಿ ಹೊರಟಿದ್ದರು. ಕಾರು ಚಲಿಸುತ್ತಿದ್ದ ಸಂದರ್ಭದಲ್ಲೇ ಬ್ಯಾರಿಕೇಡ್‌ ಬಿದ್ದಿತ್ತು. ಸ್ವಲ್ಪದರಲ್ಲೇ ಕಾರು ಮುಂದಕ್ಕೆ ಚಲಿಸಿದ್ದರಿಂದ, ಕಾರು ಭಾಗಶಃ ಜಖಂಗೊಂಡಿದೆ. ಕಾರಿನ ಮುಂದಿನ ಸೀಟಿನಲ್ಲಿ ಕುಳಿತಿದ್ದವರಿಗೆ ಅದೃಷ್ಟವಶಾತ್ ಯಾವುದೇ ಗಾಯಗಳಾಗಿಲ್ಲ.

Also Read  ವೇಶ್ಯಾವಾಟಿಕೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ  ➤ ಐಷಾರಾಮಿ ಜೀವನಕ್ಕಾಗಿ ವೃತ್ತಿ ಆಯ್ಕೆ..!

 

error: Content is protected !!
Scroll to Top