(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಎಪಿಎಲ್ ಕಾರ್ಡ್ ದಾರರಿಗೆ ನೀಡಲಾಗುತ್ತಿದ್ದ ಅಕ್ಕಿ ವಿತರಣೆ ಸುಮಾರು ಆರು ತಿಂಗಳಿನಿಂದ ನಿಲ್ಲಿಸಲಾಗಿದೆ. ಕೆಲವೆಡೆ ಮಾತ್ರ ಪೂರೈಕೆಯಾಗುತ್ತಿದೆ ಎಂದು ಹೇಳಲಾಗಿದೆ. ಆಹಾರ ಇಲಾಖೆ ಎಪಿಎಲ್ ಕುಟುಂಬಗಳಿಗೆ ಕನಿಷ್ಠ 5 ಕೆಜಿ, ಗರಿಷ್ಠ 10 ಕೆಜಿ ಆಹಾರ ಧಾನ್ಯ ವಿತರಿಸುತ್ತಿದೆ.
ಏಕ ಸದಸ್ಯ ಕುಟುಂಬಕ್ಕೆ 5 ಕೆಜಿ ಅಕ್ಕಿ ಮತ್ತು ಇಬ್ಬರು ಹಾಗೂ ಹೆಚ್ಚಿನ ಸದಸ್ಯರನ್ನು ಹೊಂದಿದ ಕುಟುಂಬಕ್ಕೆ 10 ಕೆಜಿ ಅಕ್ಕಿಯನ್ನು ಪ್ರತಿ ಕೆಜಿಗೆ 15 ರೂಪಾಯಿ ದರದಲ್ಲಿ ನೀಡಲಾಗುವುದು. ಇದಕ್ಕಾಗಿ ಭಾರತ ಆಹಾರ ನಿಗಮದಿಂದ ನಡೆಸುವ ಇ -ಹರಾಜಿನಲ್ಲಿ ಅಕ್ಕಿ ಖರೀದಿಸಲಾಗುತ್ತದೆ.
ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ದಾರರಿಗೆ ಉಚಿತವಾಗಿ, ಎಪಿಎಲ್ ಕಾರ್ಡ್ ದಾರರಿಗೆ ಪ್ರತಿ ಕೆಜಿಗೆ 15 ರೂಪಾಯಿಯಂತೆ 150 ರೂಪಾಯಿಗೆ 10 ಕೆಜಿ ವಿತರಿಸಲಾಗುತ್ತದೆ. ಎಪಿಎಲ್ ಕಾರ್ಡ್ ದಾರರಿಗೆ ಹಲವು ಕಡೆ ಅಕ್ಕಿ ಸಿಗುತ್ತಿಲ್ಲ. ನ್ಯಾಯ ಬೆಲೆ ಅಂಗಡಿಗಳಿಗೆ ಅಲೆದಾಡುವ ಪರಿಸ್ಥಿತಿ ಎದುರಾಗಿದೆ ಎಂದು ಹೇಳಲಾಗಿದೆ.