ಭಾರತೀಯ ಜೀವ ವಿಮಾ ನಿಗದಲ್ಲಿ 8000ಕ್ಕೂ ಅಧಿಕ ಹುದ್ದೆಗಳ ನೇಮಕಾತಿ…!!!  

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಭಾರತೀಯ ಜೀವ ವಿಮಾ ನಿಗಮದಲ್ಲಿ 8345 ಅಪ್ರೆಂಟಿಸ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಪದವಿ ವಿದ್ಯಾರ್ಹತೆ ಹೊಂದಿರುವ ಮತ್ತು ಜನವರಿ 1, 2023ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಅಪ್ರೆಂಟಿಸ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,650/- ರಿಂದ 90,205/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಸಾಮಾನ್ಯ ಅರ್ಜಿದಾರರು 750/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ.  ಅರ್ಜಿದಾರರನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Also Read  ರಾಜ್ಯದಲ್ಲಿಂದು ಕೊರೋನಾ ಸೋಂಕಿಗೆ 116 ಮಂದಿ ಬಲಿ ➤ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 401 ಮಂದಿಗೆ ಕೊರೋನಾ ದೃಢ

error: Content is protected !!
Scroll to Top