ಮಂಗಳೂರು: ಡ್ರಗ್ಸ್ ಪ್ರಕರಣ, ಮತ್ತೇ 9 ಮಂದಿ ಅರೆಸ್ಟ್   ➤ ಬಂಧಿತರ ಸಂಖ್ಯೆ 24ಕ್ಕೆ ಏರಿಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.23. ನಶೆಯಲ್ಲಿದ್ದ ವೈದ್ಯರ ಬೆನ್ನು ಹತ್ತಿದ್ದ ಪೊಲೀಸರು ಮತ್ತೆ 9 ಮಂದಿಯನ್ನು‌ ಬಂಧನ ಮಾಡಿದ್ದಾರೆ. ಇಬ್ಬರು ವೈದ್ಯರು ಸೇರಿದಂತೆ ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಪೊಲೀಸರ ಅತಿಥಿಗಳಾಗಿದ್ದು, ಬಂಧಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.

ವೈದ್ಯರ ಗಾಂಜಾ ಘಾಟಿನ ನಶೆ ಇನ್ನೂ ಇಳಿಯುವ ಲಕ್ಷಣ ಕಾಣುತ್ತಿಲ್ಲ‌. ಪೊಲೀಸರು ಕೆದಕಿದಷ್ಟು ಹೆಚ್ಚು ಮಂದಿ ಈ ಪ್ರಕರಣದಲ್ಲಿ ಬಲೆಗೆ ಬೀಳುತ್ತಲೇ ಇದ್ದಾರೆ. ವೈದ್ಯರ ಗಾಂಜಾ ಘಾಟಿನ ಹಿಂದೆ‌ ಬಿದ್ದ ಪೊಲೀಸರು ಇದೀಗ ಮತ್ತೆ ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ. ಶ್ರೀನಿವಾಸ ಆಸ್ಪತ್ರೆಯ ಕರ್ನಾಟಕದ ವೈದ್ಯ ಸಿದ್ದಾರ್ಥ್ ಪವಸ್ಕರ್(29) ಮತ್ತು ದುರ್ಗಾ ಸಂಜೀವಿನಿ ಆಸ್ಪತ್ರೆಯ ಕರ್ನಾಟಕದ ವೈದ್ಯ ಡಾ.ಸುಧೀಂದ್ರ(34) ಬಂಧಕ್ಕೊಳಗಾದ ವೈದ್ಯರಾಗಿದ್ದಾರೆ.

Also Read  ಆಲಂಕಾರು ಶ್ರೀ ಭಾರತೀ ಶಾಲಾ ವಿದ್ಯಾರ್ಥಿಗಳ ವಿಶ್ವದಾಖಲೆ ಪ್ರದರ್ಶನ

 

error: Content is protected !!
Scroll to Top