ರಂಗಭೂಮಿ ಕಲಾವಿದ ಕುಸಿದು ಬಿದ್ದು ಮೃತ್ಯು..!

(ನ್ಯೂಸ್ ಕಡಬ)newskadaba.com ಬ್ರಹ್ಮಾವರ, ಜ.24. ರಂಗ ಭೂಮಿ ಯುವ ನಟರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.


ಬ್ರಹ್ಮಾವರದ ಕಾರ್ತಿಕ್ ಕುಮಾರ್(31) ಮೃತ ಯುವಕ ಎಂದು ಗುರುತಿಸಲಾಗಿದೆ. ಕಳೆದ 1 ತಿಂಗಳಿನಿಂದ ಕಾರ್ತಿಕ್ ವಿಪರೀತ ಕೆಮ್ಮು ಕಾಯಿಲೆಯಿಂದ ಬಳಲುತ್ತಿದ್ದು, ಅಕ್ಕನ ಮನೆಯ ದೈವದ ಮನೆಯಲ್ಲಿ ದರ್ಶನ ಆಗುತ್ತಿರುವಾಗ ಕುರ್ಚಿಯಲ್ಲಿ ಕುಳಿತಿದ್ದ ಕಾರ್ತಿಕ್ ಕುಸಿದು ಬಿದ್ದರೆನ್ನಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರಾದರೂ ಸಂಜೆ ವೇಳೆ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಹೃದಯಾಘಾತ- ಯುವಕ ಮೃತ್ಯು..!

error: Content is protected !!
Scroll to Top