(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.24. ವಿವಾದಗಳ ನಡುವೆಯೂ ಶಿಕ್ಷಣ ಇಲಾಖೆಯು ಪ್ರಸಕ್ತ ವರ್ಷದಲ್ಲಿ 5ನೆ ಮತ್ತು 8ನೆ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆಗಳನ್ನು ನಡೆಸುತ್ತಿದ್ದು, ಪರೀಕ್ಷಾ ಕೇಂದ್ರಗಳನ್ನು ಗೊತ್ತುಪಡಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ.
ಬಿಇಓ ಲಾಗೀನ್‍ನಲ್ಲಿ ಪರೀಕ್ಷಾ ಕೇಂದ್ರಗಳ ರಚನೆಯನ್ನು ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಸೂಚಿಸಿದೆ. ಕಡ್ಡಾಯವಾಗಿ ಜ.30ರೊಳಗೆ ಪರೀಕ್ಷಾ ಕೇಂದ್ರಗಳ ರಚನಾ ಕಾರ್ಯವನ್ನು ಗುರುತಿಸುವಂತೆ ಸೂಚಿಸಿದೆ. ಶಾಲಾವಾರು ವಿದ್ಯಾರ್ಥಿಗಳ ಸಂಖ್ಯೆಯನ್ನು ಆಧಾರಿಸಿ, 5ನೆ ತರಗತಿ ಪರೀಕ್ಷಾ ಕೇಂದ್ರದಲ್ಲಿ ಕನಿಷ್ಠ 25 ವಿದ್ಯಾರ್ಥಿಗಳು ಒಂದು ಕೇಂದ್ರದಲ್ಲಿ ಲಭ್ಯವಾಗುವಂತೆ ಮ್ಯಾಪಿಂಗ್ ಮಾಡಬೇಕು.
Also Read ಬಾಣಂತಿಯ ಆರೋಗ್ಯ ತಪಾಸಣೆಗೆ ಬಂದಿದ್ದ ಸಿಬ್ಬಂದಿಯ ಮೇಲೆ ಸಾಕುನಾಯಿ ದಾಳಿ - ಮಾಲೀಕನ ವಿರುದ್ದ ಪ್ರಕರಣ ದಾಖಲು