ಫೆ. 17 ರಂದು ರಾಜ್ಯ ಬಜೆಟ್ ಮಂಡನೆ ➤  ಕಲ್ಯಾಣ ಕರ್ನಾಟಕಕ್ಕೆ ಬಂಪರ್ ಘೋಷಣೆ !

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.24. ಫೆ. 17 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಲಿದ್ದು, ಫೆಬ್ರವರಿ 1ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಈ ಬಾರಿಯ ಬಜೆಟ್ ನಲ್ಲಿ ಜನಪ್ರಿಯ ಘೋಷಣೆ ಮಾಡುವ ಸಾಧ್ಯತೆ ಇದೆ.

ಸಿಎಂ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಇಲಾಖಾವಾರು ಬಜೆಟ್ ಪೂರ್ವಭಾವಿ ಸಭೆ ಆರಂಭಸಿದ್ದು, ಈ ಬಾರಿ ಬಜೆಟ್ ನಲ್ಲಿ ಬಂಪರ್ ಘೋಷಣೆಗಳನ್ನು ಮಾಡುವ ಸಾಧ್ಯತೆ ಇದೆ.

ಚುನಾವಣೆ ಸಮೀಪವಿರುವ ಹಿನ್ನೆಲೆಯಲ್ಲಿ ಈ ಬಾರಿಯ ಬಜೆಟ್ ನಲ್ಲಿ ರಾಜ್ಯದಲ್ಲಿ ಉಚಿತ ವಿದ್ಯುತ್ ಪೂರೈಕೆ, ವಿವಿಧ ಪಿಂಚಣಿ ಹೆಚ್ಚಳ, ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ಹೆಚ್ಚಿನ ಸಬ್ಸಿಡಿ ನೀಡುವಂತಹ ಯೋಜನೆಗಳು, ಕಲ್ಯಾಣ ಕರ್ನಾಟಕಕ್ಕೆ ಹಲವು ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Also Read  ಕೇರಳದಲ್ಲಿ ನೀರಿಗಾಗಿ ಪ್ರತ್ಯೇಕ ಬಜೆಟ್

 

 

error: Content is protected !!
Scroll to Top