➤ಬಿಹಾರದಲ್ಲಿ ಕಳ್ಳಬಟ್ಟಿ ದುರಂತ ➤ 5 ಸಾವು, ಹಲವರು ಗಂಭೀರ!

(ನ್ಯೂಸ್ ಕಡಬ) newskadaba.com, ಪಾಟ್ನಾ, ಜ. 24. ಬಿಹಾರದಲ್ಲಿ ಮತ್ತೊಂದು ಕಳ್ಳಬಟ್ಟಿ ದುರಂತ ಸಂಭವಿಸಿದ್ದು, ನಕಲಿ ಮದ್ಯ ಸೇವಿಸಿ ಕನಿಷ್ಠ 5 ಮಂದಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಬಿಹಾರದ ಸಿವಾನ್ ಜಿಲ್ಲೆಯ ಲಕಾರಿ ನಬಿಗಂಜ್‌ನ ಬಾಲಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ ಸೋಮವಾರ ಐದಕ್ಕೆ ಏರಿಕೆಯಾಗಿದೆ.

ನಕಲಿ ಮದ್ಯ ಸೇವಿಸಿ ತೀವ್ರವಾಗಿ ಅಸ್ವಸ್ಥರಾಗಿರುವ ಎಲ್ಲರೂ ಸಿವಾನ್‌ನ ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಮೂಲಗಳ ಪ್ರಕಾರ, ಈ ನಕಲಿ ಮದ್ಯ ಸೇವನೆಯಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ದುರಂತಕ್ಕೆ ಸಂಬಂಧಿಸಿದಂತೆ ಇದುವರೆಗೆ 16 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

error: Content is protected !!
Scroll to Top