ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
➤ ವಿಜ್ಞಾನ ವಿಷಯ ಇಷ್ಟವಾಗಲಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ..! – News Kadaba

➤ ವಿಜ್ಞಾನ ವಿಷಯ ಇಷ್ಟವಾಗಲಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com, ವಿಜಯಪುರ, ಜ. 24. ವಿಜ್ಞಾನ ವಿಷಯ ಇಷ್ಟವಾಗಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ಮೃತ ವಿದ್ಯಾರ್ಥಿಯನ್ನು 17 ವರ್ಷದ ಬಾಲಕಿ ಎಂದು ಗುರುತಿಸಲಾಗಿದೆ. ಈಕೆ ತಾಲೂಕಿನ ಕೋಮಲಾಪುರ ನಿವಾಸಿ ಪದ್ಮಾವತಿ ನಾಗರಬೆಟ್ಟದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು.

ವಿದ್ಯಾರ್ಥಿನಿ ಸ್ನಾನಗೃಹದಲ್ಲಿ ನೇಣು ಬಿಗಿದುಕೊಂಡಿದ್ದಾಳೆ. ಎಷ್ಟು ಹೊತ್ತಾದರೂ ಆಕೆ ಹೊರಗೆ ಬಾರದೇ ಇದ್ದಾಗ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಒಳಗೆ ಇಣುಕಿ ನೋಡಿದಾಗ ಘಟನೆ ಬಳಕಿಗೆ ಬಂದಿದೆ. ಮೃತ ವಿದ್ಯಾರ್ಥಿನಿಯು  ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಡೆತ್ ನೋಟ್ ನಲ್ಲಿ ನಾನು ಕ್ಷಮೆಯಾಚಿಸುತ್ತೇನೆ ನನಗೆ ವಿಜ್ಞಾನ ವಿಷಯ ಇಷ್ಟವಿಲ್ಲ ಮತ್ತು ಆದ್ದರಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಬರೆದಿದ್ದಾಳೆ.

Scroll to Top