(ನ್ಯೂಸ್ ಕಡಬ)newskadaba.com ಮಂಗಳೂರು, ಜ.24. ಕಾಡಾನೆಗಳು ನಾಡಿನತ್ತ ಹೆಜ್ಜೆ ಹಾಕಿ ಬೆಳೆಗಳನ್ನು ಧ್ವಂಸ ಮಾಡುತ್ತಿದ್ದು, ರಾಜ್ಯದ ಕೆಲವು ಪ್ರದೇಶಗಳಲ್ಲಿ ರೈತರು ಕಂಗಾಲಾಗಿದ್ದಾರೆ. ಸುಳ್ಯದ ಕೃಷಿಕರು ಇವುಗಳ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ.
ಸುಳ್ಯ ತಾಲೂಕಿನ ಮಂಡೆಕೋಲು, ಅಜ್ಜಾವರ, ಅಲೆಟ್ಟಿ ಮುಂತಾದ ಗ್ರಾಮಗಳ ಜನರು ಆನೆಗಳು ನೀಡುತ್ತಿರುವ ತೊಂದರೆಯಿಂದ ಹೈರಾಣಾಗಿದ್ದರು. ಆನೆ ಕಂದಕ, ಸೋಲಾರ್ ಬೇಲಿ, ಸಿಮೆಂಟ್ ಹಲಗೆ ಅಳವಡಿಕೆ ಹೀಗೆ ಹಲವು ತಂತ್ರಗಳನ್ನು ಅನುಷ್ಠಾನಗೊಳಿಸಿದ್ದಾರೆ.