ಮಂಗಳೂರು: ಡಾ.ಕುಮಾರ್ ರವರು ಉತ್ತಮ  ಚಟುವಟಿಕೆ ನಡೆಸಿದ ಪ್ರಶಸ್ತಿಗೆ ಆಯ್ಕೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.24. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ಮತದಾರ ನೋಂದಣಿ ಕಾರ್ಯಕ್ರಮದಲ್ಲಿ ಉತ್ತಮ ಚಟುವಟಿಕೆ ನಡೆಸಿದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಭಾರತೀಯ ಚುನಾವಣಾ ಆಯೋಗ ಈ ಪ್ರಸಸ್ತಿಯನ್ನು ನೀಡುತ್ತಿದ್ದು, ರಾಜ್ಯದಲ್ಲಿ ಒಟ್ಟು 27 ಜನರನ್ನು ಆಯ್ಕೆ ಮಾಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯವರೇ ಆದ ತಾಂತ್ರಿಕ ಅಧಿಕಾರಿ ರಾಮ ಮರಾಠಿ ಕೂಡ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಜ.25ರಂದು ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ, ಮತದಾನ ಜಾಗೃತಿ (ಸ್ವೀಪ್) ಕಾರ್ಯಕ್ರಮದ ಭಾಗವಾಗಿ ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿ ಸಾಕ್ಷರತಾ ಕ್ಲಬ್ ರಚನೆ, ಕ್ಲಬ್‌ಗಳಿಗೆ ರಾಯಭಾರಿ ನೇಮಕ, ಅರಿವು ಜಾಥಾ, ಯಕ್ಷಗಾನ ವೇಷಧಾರಿಗಳ ಮೂಲಕ ಮಾಲ್, ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಮತ್ತಿತರ ಜನದಟ್ಟಣಿ ಪ್ರದೇಶಗಳಲ್ಲಿ ಕರಪತ್ರ ಹಂಚಿಕೆ ಮಾಡಿ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿಗೆ ಯುವ ಜನರನ್ನು ಪ್ರೇರೇಪಿಸಲಾಗಿತ್ತು. ಈ ಎಲ್ಲ ಚಟುವಟಿಕೆಗಳನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಡಾ. ಕುಮಾರ್ ಪ್ರತಿಕ್ರಿಯಿಸಿದರು ಎನ್ನಲಾಗಿದೆ.

Also Read  ಬೆಳ್ತಂಗಡಿ: ರಕ್ತ ಚಂದನ ಕಳ್ಳಸಾಗಣಿಕೆ - ಇಬ್ಬರು ಆರೋಪಿಗಳು ಅರೆಸ್ಟ್

 

error: Content is protected !!
Scroll to Top