ಬೆಂಗಳೂರಿನಲ್ಲಿ ಏರೊ ಇಂಡಿಯಾ ಶೋ ➤ ಆಯೋಜನೆ ಕುರಿತು ಇಂದು ನಡೆದ ಸಭೆಯಲ್ಲಿ ಭಾಗಿಯಾದ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com, ಬೆಂಗಳೂರು. ಜ. 24. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮುಂದಿನ ತಿಂಗಳು ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಏರೊ ಇಂಡಿಯಾ ಶೋ ಆಯೋಜನೆಗೆ ಸಂಬಂಧಿಸಿದ ಸಭೆಯಲ್ಲಿ ಭಾಗವಹಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಲಬುರಗಿ ವಾಯುನೆಲೆಯಿಂದ ವಿಡಿಯೊ ಕಾನ್ಫೆರೆನ್ಸ್ ಮೂಲಕ ಅಪೆಕ್ಸ್ ಸಮಿತಿ ಸಭೆಯಲ್ಲಿ ಭಾಗಿಯಾಗಿದ್ದಾರೆ.

ಕೇಂದ್ರ ರಕ್ಷಣಾ ಇಲಾಖೆಯು ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಸುವ ಅತಿದೊಡ್ಡ ಏರ್ ಶೋ ಪ್ರದರ್ಶನ ಸಿಲಿಕಾನ್ ಸಿಟಿ ಬೆಂಗಳೂರಿನ ಹೆಗ್ಗಳಿಕೆಗಳಲ್ಲೊಂದು. ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಕಾರ್ಯಕ್ರಮಕ್ಕೆ ಆಗಮಿಸಿ ದೇಶ-ವಿದೇಶಗಳ ಲೋಹದ ಹಕ್ಕಿಗಳ ಪ್ರದರ್ಶನವನ್ನು ಕಣ್ತುಂಬಿಕೊಳ್ಳುತ್ತಾರೆ.

Also Read  ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ಧನ- ಅರ್ಜಿ ಆಹ್ವಾನ

ಈ ವರ್ಷದ 14ನೇ ಆವೃತ್ತಿಯ ಏರ್ ಶೋ ಪ್ರದರ್ಶನ ಫೆಬ್ರವರಿ 13ರಿಂದ 17ರವರೆಗೆ ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಲಿದ್ದಾರೆ.

error: Content is protected !!
Scroll to Top