(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.24. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ವಿಕಲಚೇತನರಿಗೆ ಸ್ವಯಂ ಉದ್ಯೋಗ ಕಲ್ಪಿಸಲು 2022-23ನೇ ಸಾಲಿನ ‘ಆಧಾರ’ ಯೋಜನೆಯಡಿ 1.00 ಲಕ್ಷ ರೂ. ಸಾಲ ಸೌಲಭ್ಯವನ್ನು ನೀಡಲಾಗುತ್ತಿದ್ದು, ಇದರಲ್ಲಿ 50% ಸಬ್ಸಿಡಿಯನ್ನು ಇಲಾಖೆಯು ಭರಿಸಲಿದ್ದು, ಈ ಹಿಂದೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಎಲ್ಲಾ ವಿಕಲಚೇತರು ಹಾಗೂ ಅರ್ಹ ವಿಕಲಚೇತನರು ಕೆಳಕಂಡ ಅಗತ್ಯ ದಾಖಲಾತಿಗಳೊಂದಿಗೆ 2023ರ ಫೆಬ್ರವರಿ 04 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಜಿಲ್ಲೆಯಲ್ಲಿ ಕೆಲವು ವಿಕಲಚೇತನರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿರುವುದು ಕಂಡು ಬಂದಿರುತ್ತದೆ. ಆದರೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ವಿಲೇ ಮಾಡಲು ತಾಂತ್ರಿಕ ಸಮಸ್ಯೆ ಎದುರಾಗುತ್ತಿರುವ ಹಾಗೂ ಆರ್ಥಿಕ ವರ್ಷ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ಅರ್ಜಿಗಳನ್ನು ಆನ್‌ಲೈನ್ ಮೂಲಕ ವಿಲೇ ಮಾಡಲು ಸಮಯದ ಅಭಾವವಿರುವುದರಿಂದ ಪ್ರಸಕ್ತ ಸಾಲಿನಲ್ಲಿ ಭೌತಿಕವಾಗಿ (ಆಫ್‌ಲೈನ್) ವಿಲೇ ಮಾಡಲಾಗುವುದು.