ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ ► ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವತ್ತ ಬಿಜೆಪಿ

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಡಿ ಇಡುತ್ತಿದ್ದಂತೆಯೇ ರಾಷ್ಟ್ರದಾದ್ಯಂತ ಬಿಜೆಪಿ ಹರ್ಷಾಚರಿಸುತ್ತಿದೆ.

ದೇಶದಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಗುಜರಾತ್ ಚುನಾವಣೆಯಲ್ಲಿ ಬಿಜೆಪಿಯು 100 ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಂತೆಯೇ ದೇಶದ ವಿವಿಧೆಡೆ ಬಿಜೆಪಿ ಕಾರ್ಯಕರ್ತರು ಸಂಭಮಾಚರಣೆಯಲ್ಲಿ ತೊಡಗಿದ್ದಾರೆ. ಹಿಮಾಚಲ ಪ್ರದೇಶದಲ್ಲಿ 68 ಸ್ಥಾನಗಳ ಪೈಕಿ 42 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದ್ದು, ಅಧಿಕಾರವನ್ನು ಮರಳಿ ತನ್ನ ತೆಕ್ಕೆಯಲ್ಲಿ ಉಳಿಸಿಕೊಳ್ಳಲಿದೆ. ತೀವ್ರ ಪೈಪೋಟಿಯ ನಡುವೆಯೂ ಪಕ್ಷೇತರ ಅಭ್ಯರ್ಥಿಯಾಗಿದ್ದ ಜಿಗ್ನೇಶ್ ಮೇವಾನಿ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ.

Also Read  ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ್ರೆ 'ಗಲ್ಲು ಶಿಕ್ಷೆ' - ಗೃಹ ಸಚಿವ ಅಮಿತ್‌ ಶಾ

ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಯಶ ಸಾಧಿಸಿದ ಹಿನ್ನೆಲೆಯಲ್ಲಿ ಇಂದು ಸಂಜೆ 4.30 ಕ್ಕೆ ಕಡಬ ಪೇಟೆಯಲ್ಲಿ ಹರ್ಷಾಚರಣೆ ನಡೆಯಲಿದೆ ಎಂದು ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ಕಡಬ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top