(ನ್ಯೂಸ್ ಕಡಬ)newskadaba.com ಮಂಗಳೂರು, ಜ.24. ನಗರದಲ್ಲಿ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಉತ್ತರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಂದರು ಜೆ.ಎಂ ರೋಡ್ ನ ತೂಸಿಮನ್ ಹೌಸ್ ನ ನಿವಾಸಿ ಇಕ್ಬಾಲ್ ಆಲಿ ಅಹಮ್ಮದ್ ಯಾನೆ ಇಕ್ಬಾಲ್ (38) ಎಂದು ಗುರುತಿಸಲಾಗಿದೆ.
ಆರೋಪಿ ಕುದ್ರೋಳಿಯ ಮೊಯಿದ್ದಿನ ನಗರದ ಬಳಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ವಸ್ತುವನ್ನು ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದಾಗ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈ ವೇಳೆ 11.13 ಗ್ರಾಂ ತೂಕದ 33,000 ರೂ. ಮೌಲ್ಯದ ಮಾದಕ ವಸ್ತು ಹಾಗೂ 5000 ರೂ ಮೌಲ್ಯದ ಮೊಬೈಲ್ ಪೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ.