ಜ. 26ರಿಂದ ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದರ್ಶನ ➤ ಎಚ್.ಆರ್. ನಾಯಕ್

(ನ್ಯೂಸ್ ಕಡಬ)newskadaba.com ಮಂಗಳೂರು, ಜ.25. ತೋಟಗಾರಿಕೆ ಇಲಾಖೆ, ಕದ್ರಿ ಉದ್ಯಾನವನ ಸಮಿತಿ ಹಾಗೂ ಮಂಗಳೂರಿನ ಸಿರಿ ತೋಟಗಾರಿಕೆ ಸಂಘ ಮತ್ತು ಇತರೆ ಅಭಿವೃದ್ಧಿ ಇಲಾಖೆಗಳ ಸಹಭಾಗಿತ್ವದಲ್ಲಿ ನಗರದ ಕದ್ರಿ ಉದ್ಯಾನವನದಲ್ಲಿ ಜನವರಿ 26ರಿಂದ 29ರವರೆಗೆ ಫಲಪುಷ್ಪ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಎಚ್.ಆರ್. ನಾಯಕ್ ತಿಳಿಸಿದ್ದಾರೆ.

ಜನವರಿ 24ರ ಮಂಗಳವಾರ ನಗರದ ತೋಟಗಾರಿಕೆ ಇಲಾಖೆಯಲ್ಲಿರುವ ಅವರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜನವರಿ 26ರ ಬೆಳಗ್ಗೆ 10 ಗಂಟೆಗೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಚಾಲನೆ ನೀಡುವರು ಎಂದರು.

Also Read  ಕಡಬದ ವಿವಿಧ ಸಂಘಸಂಸ್ಥೆಗಳ ಹಾಗೂ ಸಾರ್ವಜನಿಕರ ಪರವಾಗಿ ► ಸಾಹಿತಿ ಗೋಪಾಲ್ ರಾವ್‌ರಿಗೆ ಸಾರ್ವಜನಿಕ ಶ್ರದ್ಧಾಂಜಲಿ

ತೋಟಗಾರಿಕೆ ಚಟುವಟಿಕೆಗಳು ಹಾಗೂ ಕಲೆಯನ್ನು ಸಾರ್ವಜನಿಕರಲ್ಲಿ ಉದ್ದೀಪನಗೊಳಿಸುವ ಮೂಲಕ ತೋಟಗಾರಿಕೆಯಲ್ಲಿ ಲಭ್ಯವಿರುವ ಅವಕಾಶಗಳನ್ನು ಬಳಸಿಕೊಂಡು ಪರಿಸರ ಸಂರಕ್ಷಣೆ ಸಾರ್ವಜನಿಕ ನೈರ್ಮಲ್ಯ, ಗ್ರಾಮ, ನಗರಗಳನ್ನು ಸುಂದರಗೊಳಿಸುವುದು, ಮೌಲ್ಯವರ್ಧನೆ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಮೂಲಕ ತೋಟಗಾರಿಕೆ ಉದ್ದಿಮೆಯನ್ನು ಮುಂದಕ್ಕೆ ಕೊಂಡೊಯ್ಯುವ ಉದ್ದೇಶವನ್ನು ಈ ಮೂಲಕ ಹೊಂದಲಾಗಿದೆ ಎಂದವರು ಹೇಳಿದರು.

 

error: Content is protected !!
Scroll to Top