ವಿಟ್ಲ: ವ್ಯಾಪಾರಿಗೆ ಹಲ್ಲೆ ಪ್ರಕರಣ ➤  ತಲೆ ಮರೆಸಿಕೊಂಡಿದ್ದ ಮೂರನೇ ಆರೋಪಿ ಅಂದರ್

(ನ್ಯೂಸ್ ಕಡಬ)newskadaba.com ವಿಟ್ಲ, ಜ.25. ಜಾತ್ರೆಯ ಸಂತೆಯಲ್ಲಿ ವ್ಯಾಪಾರ ಮಾಡಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ತಲೆಮರೆಸಿಕೊಂಡಿದ್ದ ಮೂರನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಟ್ಲ ಜಾತ್ರೋತ್ಸವ ಸಂದರ್ಭದಲ್ಲಿ ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣೇಶ್ ಕಡಂಬು, ಮಂಜುನಾಥ ಮತ್ತು ಇತರ ನಾಲ್ಕು ಯುವಕರ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ಪ್ರಮುಖ ಆರೋಪಿ ಗಣೇಶ್ ಕಡಂಬುನನ್ನು ಈಗಾಗಲೇ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಇನ್ಸ್ ಪೆಕ್ಟರ್ ಹೆಚ್.ಇ ನಾಗರಾಜ್ ಇವರ ನೇತೃತ್ವದಲ್ಲಿ ಸಬ್ ಇನ್‌ಸ್ಪೆಕ್ಟರ್ ಸಂದೀಪ್ ಕುಮಾರ್ ಶೆಟ್ಟಿ ತಂಡ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಇದೀಗ ಮೂರನೇ ಆರೋಪಿ ಹರ್ಷಿತ್ ನನ್ನು ಬಂಧಿಸಲಾಗಿದೆ.

Also Read  ಸುರತ್ಕಲ್ : ರೈಲ್ವೇ ಹಳಿ  ಮೇಲೆ ಯುವಕನೋರ್ವನ ಮೃತದೇಹ ಪತ್ತೆ

 

error: Content is protected !!
Scroll to Top