(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಜ.25. ಕೊಪ್ಪ ಗ್ರಾಮದಲ್ಲಿ ಮತ್ತೆ ಈ ಬಾರಿಯ ಮೊದಲ ಮಂಗನ ಕಾಯಿಲೆ (ಕೆಎಫ್ಡಿ) ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಕೊಪ್ಪ ಗ್ರಾಮದಲ್ಲಿ ಕೆಲಸ ಮಾಡುತ್ತಿದ್ದ ಬಾಳೆಹೊನ್ನೂರು ಮೂಲದ ವ್ಯಕ್ತಿಯಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದೆ.
ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆ ಆರೋಗ್ಯ ಇಲಾಖೆ ವ್ಯಕ್ತಿಯೋರ್ವರ ಮಾದರಿ ಪರೀಕ್ಷೆಗೆ ಕಳುಹಿಸಿತ್ತು. ಇದರಲ್ಲಿ ಮಂಗನಕಾಯಿಲೆ ಇರುವುದು ಪತ್ತೆಯಾಗಿದೆ. ಸದ್ಯ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಹೈಅಲರ್ಟ್ ಕೈಗೊಂಡಿದೆ. ಮಂಗನ ಕಾಯಿಲೆ ಅರಣ್ಯ ಪ್ರದೇಶಗಳಲ್ಲಿ ಕೋತಿ, ಹೆಗ್ಗಣ ಇತ್ಯಾದಿ ಪ್ರಾಣಿಗಳಿಗೆ ವೈರಸ್ ತಗುಲಿದರೆ, ಹೇನು, ಚಿಗಟ ಇತ್ಯಾದಿ ಮೂಲಕ ಅದು ಮನುಷ್ಯರಿಗೆ ಸುಲಭವಾಗಿ ಹರಡುವ ಸಾಧ್ಯತೆ ಇರುತ್ತದೆ.