(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.25. ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸರ್ಕಾರಿ ನೌಕರರಿಗೆ 5 ಸಾವಿರ ರೂ. ಪ್ರೋತ್ಸಾಹ ಧನ ನೀಡುವ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತೆಯನ್ನು ಬಡ್ತಿ, ಮುಂಬಡ್ತಿಗಾಗಿ ಪಾಸ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಡಿಸೆಂಬರ್ 31, 2022ರೊಳಗೆ ಮುಕ್ತಾಯಗೊಳಿಸುವುದಕ್ಕೆ ಸೂಚಿಸಲಾಗಿತ್ತು. ನಂತರ ಈ ಅವಧಿಯನ್ನು ಡಿ.31, 2023ರವರೆಗೆ ವಿಸ್ತರಿಸಲಾಗಿತ್ತು.
ಇದೀಗ ರಾಜ್ಯ ಸರ್ಕಾರ ನೌಕರರಿಗೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಸದರಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಸೇವಾನಿರತ ಸರ್ಕಾರಿ ನೌಕರರು ಹಾಜರುಪಡಿಸುವ ಡಿಜಿಟಲ್ ಸಹಿ ಹೊಂದಿರುವ ಕಂಪ್ಯೂಟರ್ ಸಾಕ್ಷರತಾ ಪರೀಕ್ಷಾ ಪುಮಾಣ ಪತ್ರವನ್ನು ಪರಿಶೀಲಿಸಿ ಉತ್ತೀರ್ಣರಾದ ದಿನಾಂಕವನ್ನು ಖಚಿತಪಡಿಸಿಕೊಂಡು ಪ್ರೋತ್ಸಾಹ ಧನ ಮಂಜೂರು ಮಾಡಲು ಕ್ರಮಕೈಗೊಳ್ಳುವಂತೆ ಪ್ರಾಧಿಕಾರಗಳಿಗೆ ಈ ಮೂಲಕ ಸರ್ಕಾರ ಆದೇಶಿಸಿದೆ.