ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ► ಕಡಬದಲ್ಲಿ ಬಿಜೆಪಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಬಹುಮತದೊಂದಿಗೆ ವಿಜಯದ ನಗೆ ಬೀರುತ್ತಿದ್ದಂತೆ ರಾಷ್ಟ್ರದಾದ್ಯಂತ ಬಿಜೆಪಿಯಲ್ಲಿ ಸಂಭ್ರಮಾಚರಣೆ ಮನೆಮಾಡಿದೆ.

ಕಡಬ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಕಡಬ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಸಮಿತಿಯ ಸದಸ್ಯರಾದ ಕೃಷ್ಣ ಶೆಟ್ಟಿ, ಮಾಜಿ‌ ಅಧ್ಯಕ್ಷರಾದ ಸತೀಶ್ ನಾಯ್ಕ್, ಎಪಿಎಂಸಿ ಸದಸ್ಯರಾದ ಪುಲಸ್ತ್ಯಾ ರೈ, ಮೇದಪ್ಪ ಗೌಡ ಡೆಪ್ಪುಣಿ, ಹಿಂದೂ ಮುಖಂಡ ರವಿರಾಜ್ ಶೆಟ್ಟಿ, ಸುಳ್ಯ ಮಂಡಲ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಫಯಾಝ್ ಕಡಬ, ಕಡಬ ಗ್ರಾಮ ಪಂಚಾಯತ್ ಸದಸ್ಯರಾದ ಆದಂ ಕುಂಡೋಳಿ, ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ಸದಸ್ಯ ಶಿವಪ್ರಸಾದ್ ರೈ ಮೈಲೇರಿ, ಕೊಂಬಾರು ಗ್ರಾಮ ಪಂಚಾಯತ್ ಸದಸ್ಯ ಮಧುಸೂದನ್, ಕಡಬ ಪಂಚಾಯತ್ ವ್ಯಾಪ್ತಿಯ ಕಾರ್ಯದರ್ಶಿ ಅಶೋಕ್ ಕುಮಾರ್ ಪಿ., ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಜಯಚಂದ್ರ ರೈ ಕುಂಟೋಡಿ, ಪ್ರಮುಖರಾದ ಜಯರಾಂ ಆರ್ತಿಲ, ಮೋನಪ್ಪ ಗೌಡ ನಾಡೋಳಿ ಮೊದಲಾದವರು ಉಪಸ್ಥಿತರಿದ್ದರು.

Also Read  ಬಿಳಿನೆಲೆ ದೇವಸ್ಥಾನದ ಮೂರ್ತಿಗೆ ಪುಸ್ತಕ ತೂಗುಹಾಕಿದ ಕಿರಾತಕರು ► ಭಕ್ತ ವೃಂದದಿಂದ ತೀವ್ರ ಆಕ್ರೋಶ

error: Content is protected !!
Scroll to Top