ಪ್ರೀತಿ ಗೆಹ್ಲೋತ್‌ ಸೇರಿ 3 ಐಎಎಸ್ ಅಧಿಕಾರಿಗಳ ವರ್ಗಾವಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.25. ಕರ್ನಾಟಕ ಸರ್ಕಾರ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಇರುವಾಗ ಆಡಳಿತ ಯಂತ್ರದಲ್ಲಿ ಹಲವು ಬದಲಾವಣೆ ಮಾಡುತ್ತಿದೆ. ಮೂವರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಮೂವರು ಐಎಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆಗೊಳಿಸಿದೆ. ತಕ್ಷಣದಿಂದಲೇ ಈ ಆದೇಶ ಜಾರಿಗೆ ಬರಲಿದೆ ಎಂದು ಹೊರಡಿಸಿದ ಆದೇಶದಲ್ಲಿ ತಿಳಿಸಿದೆ. 2016ನೇ ಬ್ಯಾಚ್ ಕರ್ನಾಟಕ ಕೆಡರ್‌ನ ಐಎಎಸ್ ಅಧಿಕಾರಿ ಪ್ರೀತಿ ಗೆಹ್ಲೋಟ್ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಪುರಸಭೆ ದತ್ತಾಂಶ ಸೊಸೈಟಿ (ಕೆಎಂಡಿಎಸ್) ಜಂಟಿ ಆಯುಕ್ತರಾಗಿದ್ದ ಪ್ರೀತಿ ಗೆಹ್ಲೋಟ್‌ರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಶೇಷ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.

Also Read  ಪತ್ರಕರ್ತೆ ಗೌರಿ ಲಂಕೇಶ್ ಬರ್ಬರ ಹತ್ಯೆ

 

error: Content is protected !!
Scroll to Top