(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.25. ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಯಶಸ್ವಿನಿ ಯೋಜನೆಯಡಿಯಲ್ಲಿ ಬರುವ ಚಿಕಿತ್ಸಾ ದರ ಪರಿಷ್ಕರಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ.
ರಾಜ್ಯ ಸರ್ಕಾರವು ಪ್ರಸ್ತುತ ಆಯುಷ್ಮಾನ್ ಭಾರತ್ ಯೋಜನೆ ದರಕ್ಕಿಂತ ಕಡಿಮೆಯಿದ್ದಲ್ಲಿ ಅಂತಹ ಚಿಕಿತ್ಸಾ ದರಗಳನ್ನು ಹಿಂದೇ ಜಾರಿಯಲ್ಲಿದ್ದ ದರಕ್ಕೆ ಸಮಾನವಾಗಿ ಅಳವಡಿಸಿಕೊಳ್ಳಲು ಅಧಿಕೃತ ಆದೇಶ ಹೊರಡಿಸಿದೆ.
ಗ್ರಾಮೀಣ ಸಹಕಾರ ಸಂಘಗಳ, ಸ್ವ-ಸಹಾಯ ಗುಂಪುಗಳ ಗರಿಷ್ಟ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ ರೂ.500/- ಗಳ ವಂತಿಗೆ ಮತ್ತು ಹೆಚ್ಚುವರಿ ಪ್ರತಿಯೊಬ್ಬ ಸದಸ್ಯರಿಗೆ ರೂ.100/-ಗಳನ್ನು ಪಾವತಿಸಬೇಕು. ನಗರ ಸಹಕಾರ ಸಂಘಗಳ ಗರಿಷ್ಠ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ರೂ.1,000/- ಗಳ ವಂತಿಗೆ ಮತ್ತು ಹೆಚ್ಚುವರಿ ಪ್ರತಿಯೊಬ್ಬ ಸದಸ್ಯರಿಗೆ ರೂ.200/- ಗಳನ್ನು ಪಾವತಿಸಬೇಕು ಎಂದು ತಿಳಿಸಿದೆ.