(ನ್ಯೂಸ್ ಕಡಬ)newskadaba.com ಉಳ್ಳಾಲ, ಜ. 25. ಕಗ್ಗತ್ತಲು ಆವರಿಸಿದ 500 ಮೀ ಉದ್ದದ ನಿರ್ಜನ ಪ್ರದೇಶದ ದಾರಿಯಲ್ಲಿ ಮೊಬೈಲ್ ಟಾರ್ಚ್ ಹಿಡಿದುಕೊಂಡೇ ವಿದ್ಯಾರ್ಥಿನಿಯರ ಪ್ರಯಾಣ, ಕೆಂಪು ತೈಲ ಮಿಶ್ರಿತ ಹಾಸ್ಟೆಲ್ ಬಾವಿ ನೀರು, ವಠಾರವಿಡೀ ತುಂಬಿದ ಶೌಚಾಲಯದ ಹೊಂಡದ ನೀರು, ಬಸ್ ವ್ಯವಸ್ಥೆಯಿಲ್ಲದೆ ವಿದ್ಯಾರ್ಥಿನಿಯರ ನರಕಯಾತನೆ. ಒಂದು ವರ್ಷದ ಹಿಂದೆ ನಿರ್ಮಾಣವಾದ ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ (ಶ್ರೀಮತಿ ಇಂದಿರಾಗಾಂಧಿ) ಮಹಿಳಾ ನರ್ಸಿಂಗ್ ವಿದ್ಯಾರ್ಥಿನಿ ನಿಲಯದ ವ್ಯಥೆ.
ಮುಖ್ಯ ರಸ್ತೆಯಲ್ಲಿ ಬಸ್ಸಿನಿಂದ ಇಳಿಯುವ ವಿದ್ಯಾರ್ಥಿನಿಯರು 500 ಮೀ. ದೂರದಲ್ಲಿರುವ ವಿದ್ಯಾರ್ಥಿನಿ ನಿಲಯಕ್ಕೆ ನಡೆದುಕೊಂಡೇ ಹೋಗಬೇಕಿದೆ. ನಂತರ ಬರುವ ವಿದ್ಯಾರ್ಥಿನಿಯರು ನಿರ್ಜನವಾಗಿರುವ ರಸ್ತೆಯುದ್ದಕ್ಕೂ ಮೊಬೈಲ್ ಟಾರ್ಚ್ ಹಿಡಿದುಕೊಂಡು, ಆತಂಕದೊಂದಿಗೆ ನಿಲಯ ತಲುಪಬೇಕಿದೆ.