(ನ್ಯೂಸ್ ಕಡಬ)newskadaba.com ನವದೆಹಲಿ,ಜ.25. ವಿಜ್ಞಾನ ಕ್ಷೇತ್ರದಲ್ಲಿನ ವಿವಿಧ ಸಂಶೋಧನೆ ಹಾಗೂ ಸಾಧನೆಗಳನ್ನು ಪರಿಗಣಿಸಿ, ನವದೆಹಲಿಯ ಇಂಡಿಯನ್ ನ್ಯಾಷನಲ್ ಸೈನ್ಸ್ ಅಕಾಡೆಮಿ ಕೊಡಮಾಡುವ ಯಂಗ್ ಸೈಂಟಿಸ್ಟ್ ವಾರ್ಷಿಕ ಪ್ರಶಸ್ತಿ ಪುರಸ್ಕಾರಕ್ಕೆ ಕರ್ನಾಟಕದ 10 ಯುವ ವಿಜ್ಞಾನಿಗಳು ಭಾಜನರಾಗಿದ್ದಾರೆ ಎಂದು ವರದಿ ತಿಳಿಸಿದೆ.
ಅಕಾಡೆಮಿ ನೀಡುವ ಅತ್ಯಂತ ಉತ್ಕೃಷ್ಟ ಪ್ರಶಸ್ತಿ ಇದಾಗಿದ್ದು, ಪ್ರತಿ ವರ್ಷ 40 ಯುವ ವಿಜ್ಞಾನಿಗಳನ್ನು ಆಯ್ಕೆ ಮಾಡಲಾಗುತ್ತಿತ್ತು. ಈ ವರ್ಷ 42 ಯುವ ವಿಜ್ಞಾನಿಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಈ ಪೈಕಿ ಕರ್ನಾಟಕದ ಬೆಂಗಳೂರಿನಲ್ಲಿ ವ್ಯಾಸಂಗ ಹಾಗೂ ಉದ್ಯೋಗ ಮಾಡುತ್ತಿರುವ ಮಾಡಿದ 9 ವಿಜ್ಞಾನಿಗಳು ಹಾಗೂ ಮಂಗಳೂರಿನಲ್ಲಿ ವ್ಯಾಸಂಗ ಮಾಡಿದ ಓರ್ವ ವಿಜ್ಞಾನಿ ಸೇರಿದ್ದಾರೆ ಎನ್ನಲಾಗಿದೆ.
