ಬಂಟ್ವಾಳ: ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ       ➤ ಆರೋಪಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜ.25. ಬಾಲಕಿಯ ಇಚ್ಚೆಗೆ ವಿರುದ್ದವಾಗಿ ಅನೇಕ ಬಾರಿ ಲೈಂಗಿಕ ಸಂಪರ್ಕ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ 20 ವರ್ಷಗಳ ಕಾರಾಗೃಹ ಹಾಗೂ 50 ಸಾವಿರ ರೂ. ದಂಡ, ದಂಡ ಕಟ್ಟಲು ತಪ್ಪಿದಲ್ಲಿ 6 ಕಠಿಣ ಕಾರಾಗೃಹ ವಾಸ ವಿಧಿಸಿ ನ್ಯಾಯಲಯ ಆದೇಶ ಹೊರಡಿಸಿದೆ. ಅಪರಾಧಿಯನ್ನು ಬಾಬಿ(48) ಎಂದು ಗುರುತಿಸಲಾಗಿದೆ.

ಬೆಳ್ತಂಗಡಿಯ ಎರ್ಮಳಪಲ್ಕೆ ಎಂಬಲ್ಲಿ ಆರೋಪಿಯು ಬಾಲಕಿಯ ಇಚ್ಚೆಗೆ ವಿರುದ್ದವಾಗಿ ಲೈಂಗಿಕ ಸಂಪರ್ಕ ನಡೆಸಿದ್ದು, ಈ ಬಗ್ಗೆ ಬಾಲಕಿ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ಆತನ ವಿರುದ್ದ ಫೋಕ್ಸೋ ಪ್ರಕರಣ ದಾಖಲಾಗಿತ್ತು.

Also Read  ಪುತ್ತೂರು: ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ           ➤ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ತನಿಖೆ ನಡೆಸಿರುವ ಪೊಲೀಸರು ಆರೋಪಿಯ ವಿರುದ್ದ ನ್ಯಾಯಾಲಯಕ್ಕೆ ದೋಷರೋಪಣಾ ಪತ್ರವನ್ನು ಸಲ್ಲಿಸಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಆರೋಪಿಯ ಆರೋಪ ಸಾಬೀತಾಗಿದ್ದು, ಇದೀಗ ಆತನಿಗೆ ಶಿಕ್ಷೆ ನೀಡಲಾಗಿದೆ.

 

error: Content is protected !!
Scroll to Top