74ನೇ ಗಣರಾಜ್ಯೋತ್ಸವ ➤ ರಾಜ್ಯದ 20 ಮಂದಿ ಪೊಲೀಸರಿಗೆ ರಾಷ್ಟ್ರಪತಿ ಪ್ರಶಸ್ತಿ

(ನ್ಯೂಸ್ ಕಡಬ) newskadaba.com, ನವದೆಹಲಿ, ಜ. 20. ದೇಶದ 74 ನೇ ಗಣರಾಜ್ಯೋತ್ಸವದ ದಿನದ ಅಂಗವಾಗಿ ಗಣನೀಯ ಸೇವೆ ಸಲ್ಲಿಸಿದ 901 ಪೊಲೀಸ್ ಸಿಬ್ಬಂದಿಗೆ ರಾಷ್ಟ್ರಪತಿ ಪದಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಪೈಕಿ ಕರ್ನಾಟಕ ಪೋಲೀಸ್ ಸಿಬ್ಬಂದಿಗೆ ಒಟ್ಟು 20 ಪ್ರಶಸ್ತಿ ಲಭಿಸಿದೆ.

ಈ, ಗಣನೀಯ ಸೇವೆ ಸಲ್ಲಿಸಿದ 901 ಪೊಲೀಸ್ ಸಿಬ್ಬಂದಿಗೆ ರಾಷ್ಟ್ರಪತಿ ಪದಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಈ ಪೈಕಿ ಕರ್ನಾಟಕ ಪೋಲೀಸ್ ಸಿಬ್ಬಂದಿಗೆ ಒಟ್ಟು 20 ಪ್ರಶಸ್ತಿ ಲಭಿಸಿದೆ.  ಅದರಲ್ಲಿ 19 ಪ್ರಶಸ್ತಿ ವಿಶಿಷ್ಟ ಸೇವೆ ಮತ್ತು 1 ಗಣನೀಯ ಸೇವೆಗೆ ಪ್ರಶಸ್ತಿ 8 ಇತರ ಎಂದು ತಿಳಿಸಿದೆ. ಇದರಲ್ಲಿ 140 ಮಂದಿ ಪೊಲೀಸ್ ಸಿಬ್ಬಂದಿಯನ್ನು ಶೌರ್ಯ ಪ್ರಶಸ್ತಿಗಾಗಿ , 93 ಮಂದಿ ವಿಶಿಷ್ಟ ಸೇವೆಗಾಗಿ ಮರಣೋತ್ತರವಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕಕ್ಕೆ ಅಯ್ಕೆ ಮಾಡಲಾಗಿದೆ. ಇನ್ನುಳಿದ 668 ಮಂದಿಗೆ ವಿಶೇಷ ಸೇವೆಗೆ ಹಾಗೂ 140 ಶೌರ್ಯ ಪ್ರಶಸ್ತಿಗಳಲ್ಲಿ, 80 ಪ್ರಶಸ್ತಿಯನ್ನು ಎಡಪಂಥೀಯ ಉಗ್ರವಾದದಿಂದ ಪೀಡಿತ ಪ್ರದೇಶಗಳ ಪೊಲೀಸ್ ಸಿಬ್ಬಂದಿಗೆ ಮತ್ತು 45 ಜಮ್ಮು ಮತ್ತು ಕಾಶ್ಮೀರ ಪ್ರದೇಶದವರಿಗೆ ನೀಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ತನ್ನ ಮಾಹಿತಿಯಲ್ಲಿ ತಿಳಿಸಿದೆ.

error: Content is protected !!
Scroll to Top