ಮಂಗಳೂರು: ವ್ಯಾನ್‌ನಲ್ಲಿಯೇ ಬೆಂಕಿ ಹಚ್ಚಿಕೊಂಡು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.26. ಉಡುಪಿ ಜಿಲ್ಲೆಯ ಮುಂಡ್ಕೂರು ಗ್ರಾಮದಲ್ಲಿ 46 ವರ್ಷದ ವ್ಯಕ್ತಿಯೊಬ್ಬರು ತಮ್ಮ ವ್ಯಾನ್‌ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೃಷ್ಣ ಸಫಲಿಗ ಎಂದು ಗುರುತಿಸಲಾಗಿದ್ದು, ಮೃತರು ತಮ್ಮ ಮಾಲೀಕತ್ವದ ವ್ಯಾನ್ ಅನ್ನು ಟ್ಯಾಕ್ಸಿಯಾಗಿ ಬಳಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ತಡರಾತ್ರಿ ವಾಹನದಲ್ಲಿ ಕುಳಿತು ತನ್ನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾರೆ. ತನ್ನ ಸೋದರನ ಮನೆಯಲ್ಲಿ ನಡೆದ ‘ಮೆಹೆಂದಿ’ ಕಾರ್ಯಕ್ರಮದಿಂದ ವಾಪಸಾಗುತ್ತಿದ್ದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಕಾರಣ ಏನೆಂಬುದು ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

Also Read  ಉದ್ಯಮ ನೋಂದಣಿ ಪ್ರಮಾಣ ಪತ್ರ - ಕಡ್ಡಾಯ

 

error: Content is protected !!
Scroll to Top