ಗಣರಾಜ್ಯೋತ್ಸವ ಪರೇಡ್ ನಲ್ಲಿ ಗಮನ ಸೆಳೆದ ಕರ್ನಾಟಕದ ಸ್ತಬ್ದಚಿತ್ರ..!

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.26. 74ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿ ನಡೆದ ಪರೇಡ್​ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಎಲ್ಲರ ಗಮನಸೆಳೆಯಿತು.

ಪರೇಡ್ ನಲ್ಲಿ ಕರ್ನಾಟಕದಿಂದ ನಾರಿ ಶಕ್ತಿ ಸಾರುವ ಸ್ತಬ್ಧಚಿತ್ರವನ್ನು ಪ್ರದರ್ಶಿಸಲಾಯಿತು. ಸ್ತಬ್ಧ ಚಿತ್ರದ ಮೂಲಕ ಪದ್ಮಶ್ರೀ ಪುರಸ್ಕೃತರಾದ ಸೂಲಗಿತ್ತಿ ನರಸಮ್ಮ, ತುಳಸಿ ಗೌಡ ಮತ್ತು ಸಾಲು ಮರದ ತಿಮ್ಮಕ್ಕ ಅವರ ಸಾಧನೆಗಳ ಅನಾವರಣಗೊಳಿಸಲಾಯಿತು. ಗಿಡ-ಮರ ,ಬೆಟ್ಟ-ಗುಡ್ಡಗಳಿಂದ ಸ್ತಬ್ಧಚಿತ್ರ ಶೃಂಗಾರಗೊಂಡಿತ್ತು ಎನ್ನಲಾಗಿದೆ.

 

error: Content is protected !!
Scroll to Top